ವಿಜ್ಞಾನ ಬರಹಗಾರರ ತರಬೇತಿ ಶಿಬಿರ
ಗುಲ್ಬರ್ಗ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ರಾಜ್ಯ ಮಟ್ಟದ 28ನೇ ಉದಯೋನ್ಮುಖ ಕನ್ನಡ ಜನಪ್ರಿಯ ವಿಜ್ಞಾನ ಬರಹಗಾರರ ಶಿಬಿರ ಮೇ 3ನೇ ವಾರ ಧಾರವಾಡದಲ್ಲಿ 5 ದಿನಗಳ ಕಾಲ ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಖಜಾಂಚಿ ಗಿರೀಶ ಕಾಡ್ಲೆವಾಡ ತಿಳಿಸಿದ್ದಾರೆ. ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿಯಿರುವ ವಿಜ್ಞಾನ ಶಿಕ್ಷಕರು, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು, ವರದಿಗಾರರು, ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದು. ನುರಿತ ವಿಜ್ಞಾನ ಬರಹಗಾರರಿಂದ, ಸಂಪಾದಕರಿಂದ, ಸಂವಹನಕಾರರಿಂದ ಶಿಬಿರಾರ್ಥಿಗಳಿಗೆ ವಿಜ್ಞಾನ ಬರವಣಿಗೆಯ ಕುರಿತು ವಿವಿಧ ಕೌಶಲ್ಯ, ಆಕರಗಳು, ಶಬ್ದ-ಬಳಕೆ, ಅನುವಾದ, ವಿಜ್ಞಾನ ಪತ್ರಿಕೋದ್ಯಮ- ಸಂವಹನ ವಿಧಾನಗಳು ಮುಂತಾದ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು. ಆಸಕ್ತರು ವೈಯಕ್ತಿಕ ವಿವರದೊಂದಿಗೆ ಭಾವಚಿತ್ರ ಹಾಗೂ ಒಂದು ಸ್ವರಚಿತ ಲೇಖನವನ್ನು ಅರ್ಜಿಯ ಜೊತೆ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು- 560 070 ವಿಳಾಸಕ್ಕೆ ಏ.25ರೊಳಗೆ ತಲುಪಿಸಬೇಕು. 9448830454ಗೆ ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

