ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರ ಮೇಲೆ ಕೇಸ್
ಯಾದಗಿರಿ: ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ, ಕೆಜೆಪಿ, ಬಿಎಸ್ಸಾರ್ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರ ಮೇಲೆ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಚುನಾವಣಾಧಿಕಾರಿ ಕಚೇರಿಯಿಂದ ನೂರು ಮೀಟರ್ ಒಳಗೆ ಯಾರೂ ಪ್ರವೇಶ ಮಾಡಬಾರದು, ಗುಂಪಾಗಿ ಸೇರಬಾರದು, ರಸ್ತೆ ಮೇಲೆ ಗುಂಪಾಗಿ ನಿಂತು ಸಾರ್ವಜನಿಕರ ಓಡಾಡಕ್ಕೆ ತಡೆಯುಂಟು ಮಾಡಬಾರದು ಎಂಬ ಆದೇಶವಿದೆ. ಆದರೆ ಏ.15ರಂದು ನಾಮಪತ್ರ ಸಲ್ಲಿಕೆ ವೇಳೆ ನೂರಾರು ಜನ ಗುಂಪಾಗಿ ಸೇರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಎಂಸಿಸಿ ತಂಡದ ಚಂದ್ರಕಾಂತ ಜಾಧವ್ ಅವರು ನಗರ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ 5 ಪಕ್ಷಗಳ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
--
ಚುನಾವಣಾ ವೀಕ್ಷಕರಿಗೆ ದೂರು ಸಲ್ಲಿಸಿ
ಯಾದಗಿರಿ: ವಿಧಾನಸಭೆ ಚುನಾವಣೆ ಪಾರದರ್ಶಕ, ನ್ಯಾಯಸಮ್ಮತವಾಗಿ ನಡೆಯಲು ನಾಲ್ಕು ಮತಕ್ಷೇತ್ರಗಳಿಗೆ ಸಾಮಾನ್ಯ ಚುನಾವಣಾ ವೀಕ್ಷಕರನ್ನಾಗಿ ಚುನಾವಣಾ ಆಯೋಗವು ನೇಮಿಸಿದ್ದು, ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದಂತೆ ದೂರು ಹಾಗೂ ಅಹವಾಲುಗಳನ್ನು ಆಯಾ ಮತಕ್ಷೇತ್ರಕ್ಕೆ ಸಂಬಂಧಿಸಿದ ವೀಕ್ಷಕರಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಪಿ.ರಾಜೇಂದ್ರ ಚೋಳನ್ ತಿಳಿಸಿದ್ದಾರೆ.
ಸುರಪುರ ಕ್ಷೇತ್ರದ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ಯು.ಜಿ.ಅವಸಕ್ ಅವರು ಆಗಮಿಸಿದ್ದು, ಅವರ ಮೊ. 9448872385 ಆಗಿದೆ. ಅವರು ಸುರಪುರ ಟೇಲರ್ ಮಂಜಿಲ್ನಲ್ಲಿ ಪ್ರತಿದಿನ ಸಂಜೆ 4ರಿಂದ 6ರವರೆಗೆ ಇರಲಿದ್ದು, ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ.
ಶಹಾಪುರ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಸುಧೀರಕುಮಾರ ದೀಕ್ಷಿತ ಆಗಮಿಸಿದ್ದು, ಅವರ ಮೊ. 94488 74634 ಆಗಿದೆ. ಅವರು ಶಹಾಪುರ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸಂಜೆ 4ರಿಂದ 6ರವರೆಗೆ ಅಹವಾಲು ಸ್ವೀಕರಿಸಲಿದ್ದಾರೆ. ಯಾದಗಿರಿ ವೀಕ್ಷಕರಾಗಿ ಕೆ.ಸಿ. ಗುಪ್ತಾ ಅವರು ಆಗಮಿಸಿದ್ದು, ಅವರ ಮೊ. 94493 44571 ಆಗಿದ್ದು, ಯಾದಗಿರಿ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಸಂಜೆ 4ರಿಂದ 6ರವರೆಗೆ ದೂರು ಸಲ್ಲಿಸಬಹುದಾಗಿದೆ. ಗುರುಮಠಕಲ್ ಚುನಾವಣಾ ವೀಕ್ಷಕರಾಗಿ ನರ್ಮದೇಶ್ವರ ಲಾಲ್ ಅವರು ಆಗಮಿಸಿದ್ದು, ಅವರ ಮೊ. 94488 74205ನ್ನು ಸಂಪರ್ಕಿಸಿ ದೂರು ನೀಡಬಹುದು. ಅಲ್ಲದೇ ಅವರು ಗುರುಮಠಕಲ್ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಮ.12ರಿಂದ 2 ಗಂಟೆವರೆಗೆ ಇರಲಿದ್ದು, ಸಾರ್ವಜನಿಕರು ಚುನಾವಣಾ ಸಂಬಂಧಿ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

