ಗುಲ್ಬರ್ಗಾ

ಮತದಾನ ಜಾಗೃತಿ ಪ್ರಚಾರ ಆಂದೋಲನ

Published On :

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಏ.19
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲಕ ಮತದಾನದ ಹಕ್ಕು ಪಡೆದಿರುವ ಮತದಾರ ಸರ್ಕಾರವನ್ನು ರಚಿಸುವಲ್ಲಿ ಉತ್ತಮ ಜನಪರ ಕಾಳಜಿ ಇರುವ ನಾಯಕನನ್ನು ಆಯ್ಕೆ ಮಾಡಲು ಸುಸ್ಥಿರ ಅಭಿವೃದ್ಧಿಯನ್ನು ಒದಗಿಸುವ ಸಮರ್ಥರು ಯಾರೆಂದು ನಿರ್ಧರಿಸಬೇಕು. ಸಮರ್ಥ ನಾಯಕನನ್ನು ಆಯ್ಕೆ ಮಾಡಲು ಮತಚಲಾಯಿಸುವ ಮೂಲಕ ಪ್ರಜ್ಞಾವಂತಿಕೆ ಮೆರೆಯಲೇಬೇಕು ಎಂದು ಸೇಡಂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ವಿ. ರಾಮನ ಹೇಳಿದರು.
ಭಾರತ ಸರ್ಕಾರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ ಗುಲ್ಬರ್ಗ ಶಿಶು ಅಭಿವೃದ್ಧಿ ಯೋಜನೆ, ಸಹಾಯಕ ಆಯುಕ್ತರು ಹಾಗೂ ತಹಸೀಲ್ದಾರ್ ಕಾರ್ಯಾಲಯ ಸೇಡಂ ಸಂಯೋಗದಲ್ಲಿ ಕುರಕುಟಾ ಗ್ರಾಮದಲ್ಲಿ ನಡೆದ ಮತದಾನದ ವಿಶೇಷ ಜಾಗೃತಿ ಪ್ರಚಾರ ಆಂದೊಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸೇಡಂ ಕಂದಾಯ ನಿರೀಕ್ಷಕ ವೆಂಕಟೇಶ ಕುಲಕರ್ಣಿ, ಮೇಲ್ವಿಚಾರಕಿ ಸವಿತಾ, ಕ್ಷೇತ್ರ ಪ್ರಚಾರ ಸಹಾಯಕ ಶಿವಶರಣಪ್ಪ ಕಿಣಗಿ, ಅಂಗನವಾಡಿ ಕಾರ್ಯಕರ್ತೆ ಪಾರ್ವತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.