ಗುಲ್ಬರ್ಗಾ

80 ಲೀಟರ್ ಸೇಂದಿ ವಶ

Published On :

ಯಾದಗಿರಿ: ಜಿಲ್ಲಾ ಚುನಾವಣಾಧಿಕಾರಿಗಳ ಆದೇಶದ ಮೇರೆಗೆ ಆಂಧ್ರ ಗಡಿ ಭಾಗದ ತಾಲೂಕಿನ ಇಡ್ಲೂರು ಹಾಗೂ ಅಮೆದಿಪುರ ಭಾಗದಲ್ಲಿ ಅಬಕಾರಿ ಸಿಬ್ಬಂದಿ ಗಸ್ತು ಮಾಡುತ್ತಿದ್ದಾಗ ತಲೆಹೊರೆ ಮೇಲೆ ಚೀಲದಲ್ಲಿ ಸಾಗಿಸುತ್ತಿದ್ದ ರು. 3 ಸಾವಿರ ಮೌಲ್ಯದ 80 ಲೀಟರ್ ಸೇಂದಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ತಲೆ ಮೇಲೆ ಚೀಲ ಹೊತ್ತು ಸಾಗಿಸುತ್ತಿದ್ದ ವ್ಯಕ್ತಿಗಳ ಮೇಲೆ ಅನುಮಾನ ಬಂದಿದ್ದರಿಂದ ಸಿಬ್ಬಂದಿ ದಾಳಿ ನಡೆಸಿದಾಗ ಆರೋಪಿಗಳು ಚೀಲವನ್ನು ಬಿಸಾಡಿ ಪರಾರಿಯಾಗಿದ್ದಾರೆ. ಆದರೆ ಅದರಲ್ಲಿ 80 ಲೀಟರ್ ಸೇಂದಿ ಪತ್ತೆಯಾಗಿದೆ. ಅದನ್ನು ವಶಕ್ಕೆ ತೆಗೆದುಕೊಂಡಿರುವ ಅಬಕಾರಿ ಪೊಲೀಸರು, ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. ಯಾದಗಿರಿ ಅಬಕಾರಿ ವಿಶೇಷ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ಅಧಿಕಾರಿಗಳಾದ ವಿಠ್ಠಲ ರಾವ್ ಎಂ. ವಾಲೀನೂರ, ಮಹ್ಮದ ಮತ್ತು ಸಿಬ್ಬಂದಿ ಎನ್. ಸಾಯಪ್ಪ, ಶರಪೋದ್ದಿನ್, ಗೃಹರಕ್ಷಕ ದಳದ ಅಶೋಕ, ಮಲ್ಲಿಕಾರ್ಜುನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.