ಕ್ಷೇತ್ರ ಅಭಿವೃದ್ಧಿಗಾಗಿ ನಮ್ಮನ್ನು ಬೆಂಬಲಿಸಿ
ಯಾದಗಿರಿ: ಗುರುಮಠಕಲ್ ಭಾಗದ ಪ್ರತಿ ಗ್ರಾಮದಲ್ಲಿಯೂ ಸಂಚರಿಸಿ ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಈ ಭಾಗದಲ್ಲಿ ಜ್ವಲಂತವಾಗಿ ತಂಡವಾಡುತ್ತಿರುವ ಸಮಸ್ಯೆಗಳಿಗೆ ಪರಿಹರಿಸಲು ಯಡಿಯೂರಪ್ಪನವರೇ ಸಮರ್ಥ ನಾಯಕ ಎಂದು ಎಲ್ಲರೂ ಮನಗಂಡಿದ್ದಾರೆ.
ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಕೆಜೆಪಿಯನ್ನು ಬೆಂಬಲಿಸಬೇಕು ಎಂದು ಕೆಜೆಪಿ ಅಭ್ಯರ್ಥಿ ವೆಂಟಕರಡ್ಡಿ ಮುದ್ನಾಳ ಮನವಿ ಮಾಡಿಕೊಂಡರು.
ಭಾನುವಾರ ಮತಕ್ಷೇತ್ರದ ಗಣಪುರ ಗ್ರಾಮದಲ್ಲಿ ಕೆಜೆಪಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಗಡಿ ಭಾಗದವಾದ ಗುರಮಠಕಲ್ ಮತಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೊಡುಗೆ ಅಪಾರ. ಈ ಬಾರಿಯ ಚುನಾವಣೆಯಲ್ಲಿ ಕೆಜೆಪಿನ್ನು ಬೆಂಬಲಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮತದಾರರು ಸಹಕರಿಸುವಂತೆ ಕೋರಿದರು. ಕೆಜೆಪಿ ರಾಜ್ಯ ಕಾರ್ಯದರ್ಶಿ ನಾಗರತ್ನಾ ಕುಪ್ಪಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಜಯಕುಮಾರ ಶಿನ್ನೂರ, ತಾಪಂ ಸದಸ್ಯ ಜಗನ್ನಾಥರಡ್ಡಿ ಯಲ್ಹೇರಿ, ನಾಗರಡ್ಡಿ, ಮುಖಂಡರಾದ ರವಿ ಮಿಲ್ಟ್ರಿ, ವೀರಭದ್ರಪ್ಪ, ಮಲ್ಲಿಕಾರ್ಜುನ, ಮಹದೇವಪ್ಪ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

