ಪಕ್ಷೇತರ ಅಭ್ಯರ್ಥಿಯಿಂದ ಪ್ರಚಾರ
ಗುರುಮಠಕಲ್: ಗಡಿ ಭಾಗದಲ್ಲಿರುವ ಗುರಮಠಕಲ್ ಮತಕ್ಷೇತ್ರವನ್ನು ಸಂಪೂರ್ಣವಾಗಿ ಅಭಿವೃದ್ಧಿಗೊಳಿಸುವ ಮಹಾದಾಸೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಜನತೆ ಆಶೀರ್ವದಿಸಬೇಕು ಎಂದು ಚಂದ್ರಶೇಖರ ದಾಸನಕೇರಿ ಹೇಳಿದರು.
ಮತಕ್ಷೇತ್ರದ ಕೆ. ಹೊಸಳ್ಳಿ ಗ್ರಾಮದಲ್ಲಿ ಪ್ರಚಾರ ಕೈಗೊಂಡು ಮಾತನಾಡಿ, ಈಗಾಗಲೇ ಗುರಮಠಕಲ್ ಕ್ಷೇತ್ರದಲ್ಲಿ ಸಂಚರಿಸಿ ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದೇನೆ.
ಜಯ ಕರ್ನಾಟಕ ಸಂಘಟನೆಯ ವತಿಯಿಂದ ಕ್ಷೇತ್ರದಲ್ಲಿನ ಹಲವು ಸಮಸ್ಯೆಗಳನ್ನು ಪರಿಹರಿಸಲು ಹಲವು ಹೋರಾಟ ಕೈಗೊಂಡು, ಜನರ ಪ್ರೀತಿ ವಿಶ್ವಾಸ ಗಳಿಸಿದ್ದೇನೆ.
ಕ್ಷೇತ್ರದಲ್ಲಿ ದಲಿತ ಮತಗಳೇ ನಿರ್ಣಾಯಕವಾಗಿವೆ. ಹೀಗಾಗಿ ಮತದಾರರು ತಮಗೆ ಆಶೀರ್ವದಿಸುವಂತೆ ಮನವಿ ಮಾಡಿಕೊಂಡರು.
ಕ್ಷೇತ್ರದ ಶಾಸಕ ಬಾಬುರಾವ್ ಚಿಂಚನಸೂರ ಅವರ ನಿರ್ಲಕ್ಷ್ಯದಿಂದ ಗುರಮಠಕಲ್ ಕ್ಷೇತ್ರ ಅಭಿವೃದ್ಧಿಯಿಂದ ಹಿಂದುಳಿಯುವಂತಾಗಿದೆ.
ಹೀಗಾಗಿ ಮತದಾರರು ಈ ಬಾರಿ ಅವರನ್ನು ತಿರಸ್ಕರಿಸುವುದು ಖಚಿತ. ರಾಜಕೀಯದಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವುದು ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ತಾವು ಸ್ಪರ್ಧಿಸುತ್ತಿರುವುದಾಗಿ ತಿಳಿಸಿದರು.
ವೀರಕನ್ನಡಿಗ ಪ್ರತಿಷ್ಠಾನದ ಅಧ್ಯಕ್ಷ ಕೃಷ್ಣಮೂರ್ತಿ ಕುಲಕರ್ಣಿ, ಅಶೋಕ ಹತ್ತಮನಿ, ಅಬ್ರಹಾಂ ಮಾತಪಳ್ಳಿ, ಸುಭಾಷ ಮೊದಲಾದವರು ಪ್ರಚಾರ ಕಾರ್ಯದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

