ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ
ಕನ್ನಡಪ್ರಭ ವಾರ್ತೆ, ಚಿತ್ತಾಪುರ, ಏ.21
ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಗೆಲ್ಲಿಸಲು ಕೋಲಿ ಸಮಾಜದ ಮತಬಾಂಧವರು ಪ್ರಮಾಣ ಮಾಡಬೇಕು ಎಂದು ಮಾಜಿ ಸಚಿವ, ಗುರುಮಠಕಲ್ ಶಾಸಕ ಬಾಬುರಾವ ಚಿಂಚನಸೂರ ಕರೆ ನೀಡಿದರು.
ಕಾಂಗ್ರೆಸ್ ಕಚೇರಿಯಲ್ಲಿ ಕೋಲಿ ಸಮಾಜದ ಮುಖಂಡರ ಸೇರ್ಪಡೆ ಕಾರ್ಯಕ್ರಮಲ್ಲಿ ಮಾತನಾಡುತ್ತ, ಕಳೆದ ಐದು ವರ್ಷಗಳಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದಲ್ಲಿ ಮಿತಿ ಮಿರಿದ ಭ್ರಷ್ಟಾಚಾರ ನಡೆದು ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ, ವಿದ್ಯುತ್, ನೀರಾವರಿ ಸೇರಿದಂತೆ ಹಲವಾರು ಸಮಸ್ಯೆಗಳಿಂದ ಜನ ತೊಂದರೆ ಪಡುತ್ತಿದ್ದರೆ, ಆ ಪಕ್ಷದ ನಾಯಕರು ಜಗಳದಲ್ಲೆ ಕಾಲ ಕಳೆಯುತ್ತಿದ್ದಾರೆ ಎಂದು ಅರೋಪಿಸಿದರು.
ಸಾಮಾಜಿಕ ನ್ಯಾಯ: ರಾಜ್ಯದಲ್ಲಿ ಸುಭದ್ರ ಸರ್ಕಾರ, ದೀನ, ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಎಲ್ಲ ವರ್ಗಕ್ಕೂ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಂಡಿತ. ಅಭ್ಯರ್ಥಿ ಪ್ರಿಯಾಂಕ ಖರ್ಗೆ ಒಳ್ಳೆ ಆಡಳಿತಗಾರರಾಗಿದ್ದು, ಅವರು ಈಗಾಗಲೇ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹೀಗಾಗಿ ಬಿಜೆಪಿ, ಕೆಜೆಪಿ, ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿ ಪ್ರಿಯಾಂಕ್ ಅವರ ಕೈ ಬಲ ಪಡಿಸುತ್ತಿರುವುದೇ ಸಾಕ್ಷಿ ಎಂದು ಹೇಳಿದರು.
ನಗರ ಅಶ್ರಯ ಸಮಿತಿ ಸದಸ್ಯ, ಬಿಜೆಪಿ ಮುಖಂಡ ಬಸವರಾಜ ಚಿನಮಳ್ಳಿ ಹಾಗೂ ಮಲ್ಲಣ್ಣ ಸಣಮೋ ಮಾಲಗತ್ತಿ ಸೇರಿದಂತೆ ನೂರಾರು ಕೋಲಿ ಸಮಾಜದ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್ ಸೇರಿದರು. ಪ್ರಿಯಾಂಕ್ ಖರ್ಗೆ ಅವರನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಅಮರೇಶ್ವರಿ ಚಿಂಚನಸೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ನಾಗಯ್ಯ ಗುತ್ತೆದಾರ, ಮುಖಂಡರಾದ ರಮೇಶ ಮರಗೋಳ, ನಾಗರೆಡ್ಡಿ ಪಾಟೀಲ್, ಡಾ. ಪ್ರಭುರಾಜ ಕಾಂತಾ, ಸೋಮಶೇಖರ ಪಾಟೀಲ್, ಮುಕ್ತಾರ ಪಟೇಲ್, ಅಣ್ಣಾರಾವ ಸಣ್ಣೂರಕರ್, ಅಜೀಜ್ ಶೇಠ, ಮಾಪಣ್ಣ ಗಂಜಿಗೇರಿ, ಬಸವರಾಜ ಚಿನಮಳ್ಳಿ, ಪಾಶಾಮಿಯ್ಯ ಕುರೇಶಿ, ನಜೀರ್ ಅಡಕಿ ಸೇರಿದಂತೆ ಇತರರು ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

