'ಸಿದ್ದರಾಮಯ್ಯರಿಂದ ಕುರುಬ ಸಮಾಜಕ್ಕೆ ಸ್ಥಾನಮಾನ'
ಚಿಂಚೋಳಿ: ರಾಜ್ಯದಲ್ಲಿ ಕುರುಬ ಸಮಾಜಕ್ಕೆ ಸೂಕ್ತ ಸ್ಥಾನಮಾನ ಮತ್ತು ಪ್ರಾತಿನಿಧ್ಯತೆ ಸಿಕ್ಕಿದ್ದು, ಕೇವಲ ಕಾಂಗ್ರೆಸ್ನ ಜನಪ್ರಿಯ ನಾಯಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದ ಮಾತ್ರ ಎಂದು ತಾಲೂಕು ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸಿದ್ದಪ್ಪ ಪೂಜಾರಿ ಹೇಳಿದರು.
ತಾಲೂಕು ಕುರುಬ ಸಮಾಜ ಅಧ್ಯಕ್ಷ ಮಲಕಪ್ಪ ಬಿರಾಪುರ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ತಾಲೂಕು ಕುರುಬ ಸಮಾಜದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಕುರುಬ ಸಮಾಜಕ್ಕೆ ಸರ್ಕಾರದಿಂದ ಅನೇಕ ಸವಲತ್ತುಗಳು ಮತ್ತು ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದ ಕುರುಬ ಸಮಾಜಕ್ಕೆ ಶೈಕ್ಷಣಿಕ, ಆರ್ಥಿಕ, ರಾಜಕೀಯ ಕ್ಷೇತ್ರಗಳಲ್ಲಿ ಹೆಚ್ಚಿನ ಸೌಲಭ್ಯಗಳು ದೊರಕಿವೆ ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿ ಡಾ. ಉಮೇಶ ಜಾಧವ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಕಾಂಗ್ರೆಸ್ ಮುಖಂಡರಾದ ರೇವಣಸಿದ್ದಪ್ಪ ಅಣಕಲ್, ಹಣಮಂತ ಪೂಜಾರಿ, ಸೂರ್ಯಕಾಂತ ಪೂಜಾರಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯ ಗೆಲವಿಗೆ ಶ್ರಮಿಸಬೇಕು ಎಂದು ಕೋರಿದರು. ತಾಲೂಕು ಕುರುಬ ಸಮಾಜಜ ಅಧ್ಯಕ್ಷ ಮಲಕಪ್ಪ ಬಿರಾಪುರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಲಿಕಾರ್ಜುನ ಸಕ್ರಿ, ರವಿ ಪೂಜಾರಿ, ಶಾಮರಾವ್ ಪೂಜಾರಿ ಮೋಘಾ, ರಾಜೇಂದ್ರ ಕನಕಪುರ ಇದ್ದರು. ರೇವಣಸಿದ್ದಪ್ಪ ಅಣಕಲ್ ಸ್ವಾಗತಿಸಿದರು. ಹಣಮಂತಪ್ಪ ಪೂಜಾರಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

