ಗುಲ್ಬರ್ಗಾ

ಕಾಂಗ್ರೆಸ್‌ನತ್ತ ಯುವಕರು: ಮಾಲಕರೆಡ್ಡಿ

Published On :

ಯಾದಗಿರಿ: ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ನಿಂದ ಮಾತ್ರ ರಾಜ್ಯ, ದೇಶದ ಅಭಿವೃದ್ಧಿ ಸಾಧ್ಯ ಎನ್ನುವುದನ್ನು ಅರಿತಿದ್ದಾರೆ. ಎಲ್ಲೆಡೆಯಂತೆ ಯಾದಗಿರಿ ನಗರ ಪ್ರದೇಶದಲ್ಲೂ ಯುವಕರ ಪಡೆಯೇ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.ಅಲ್ಲದೇ ಪಕ್ಷದ ಬೆನ್ನೆಲುಬಾಗಿ ತಮ್ಮ ಬೆಂಬಲ ನೀಡುತ್ತಿರುವುದು ನಿಜಕ್ಕೂ ಹರ್ಷದಾಯಕ ವಿಷಯ ಎಂದು ಡಾ.ಎ.ಬಿ. ಮಾಲಕರೆಡ್ಡಿ ಹೇಳಿದರು.
ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಬಡಾವಣೆಯ ಬಿಜೆಪಿ, ಜೆಡಿಎಸ್‌ನ ನೂರಕ್ಕೂ ಹೆಚ್ಚು ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು. ಬರುವ ದಿನಗಳಲ್ಲಿ ಯುವಕರಿಗೆ ಪಕ್ಷದಲ್ಲಿ ಉತ್ತಮ ಭವಿಷ್ಯವಿದೆ. ಹೈಕ ಭಾಗದಲ್ಲಿ ಯುವಕರಿಗೆ ಆದ್ಯತೆ ನೀಡಲೆಂದೇ ಕಾಂಗ್ರೆಸ್, ಅದರಲ್ಲೂ ವಿಶೇಷವಾಗಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆಯವರು ಕಲಂ 371 ಜೆ ಜಾರಿಗೆ ತರುವಲ್ಲಿ ಶ್ರಮಿಸಿದ್ದಾರೆ. ಅದಕ್ಕಾಗಿ ನಮ್ಮ ಭಾಗ ಅಭಿವೃದ್ದಿ ಕಾಣಬೇಕಾದರೆ ಅದು ಕಾಂಗ್ರೆಸ್ ಪಕ್ಷದಿಂದ ಸಾದ್ಯ. ಕಾರಣ ಇನ್ನೂ ಹೆಚ್ಚಿನ ರೀತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಯುವಕರು ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.