ಗುಲ್ಬರ್ಗಾ

ಅಪಪ್ರಚಾರ ಮಾಡುವವರನ್ನ ನಂಬಬೇಡಿ: ಸಿಎಂ ಶೆಟ್ಟರ್

Published On :

ಅಫಜಲ್ಪುರ: ತಮ್ಮ ಬೆನ್ನಿಗೆ ತಾವೇ ಚೂರಿ ಹಾಕಿಕೊಂಡು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡತ್ತಿರುವವರನ್ನು ನಂಬಬೇಡಿ ಎಂದು ಮುಖ್ಯಮಂತ್ರಿ ಶೆಟ್ಟರ್ ಹೇಳಿದರು.
ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ದೀಲಿಪ ಪಾಟೀಲ್ ಪರ ಪ್ರಚಾರದಲ್ಲಿ ಮಾತನಾಡುತ್ತ, ಕೆಲವರು ತಮ್ಮ ಬೆನ್ನಿಗೆ ತಾವೇ ಚೂರಿ ಹಾಕಿಕೊಂಡಿದ್ದಾರೆ. ಅವರು ಭ್ರಷ್ಠಾಚಾರದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ಅವರ ಹೆಸರು ಉಚ್ಛಾರಿಸದೆ ವಾದ್ಗಾಳಿ ನಡೆಸಿದ ರು.
ಕಳೆದ 5 ವರ್ಷದ ಬಿಜೆಪಿ ಸರ್ಕಾರದ ಅವಧಿಯಲ್ಲಿ ದಶಕಗಳ ಬೇಡಿಕೆಗಳನ್ನು ಈಡೇರಿಸುವ ಮೂಲಕ ರಾಜ್ಯದ ಜನತೆಯ ವಿಶ್ವಾಸ ಗಳಿಸಿರುವ ಪಕ್ಷ ಈ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಚಾರದಲ್ಲಿ ಅಭ್ಯರ್ಥಿ ದೀಲಿಪ ಪಾಟೀಲ್, ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ್, ಮಾಜಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ನಿಂಗದಳ್ಳಿ, ಡಾ.ಸಿ.ವಿ. ಟಕ್ಕಳಕಿ, ಜಿಡಿಎ ಅಧ್ಯಕ್ಷ ವಿದ್ಯಾಸಾಗರ ಕುಲಕರ್ಣಿ ಹಲವಾರು ಜನ ಮುಖಂಡರು ಮಾತನಾಡಿದರು.  
ತಾಲೂಕು ಅಧ್ಯಕ್ಷ ಅಶೋಕ ಬಗಲಿ, ಶರಣಪ್ಪ ತಳವಾರ, ಮುಕುಂದ ದೇಶಪಾಂಡೆ, ನರಹರಿ, ರಮೇಶ ನೀಲಗಾರ, ಬೀರಣ್ಣ ಕನಕ, ಎಪಿಎಂಸಿ ಮಾಜಿ ಅಧ್ಯಕ್ಷ ಅವ್ವಣ್ಣ ಮ್ಯಾಕೇರಿ, ಅಶೋಕ ಹೂಗಾರ, ಮಲ್ಲಿಕಾರ್ಜುನ ಪೂಜಾರಿ, ಹಲವಾರು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.