ಗುಲ್ಬರ್ಗಾ

ಚುನಾವಣೆ: ಶಾಲಾ ಮಕ್ಕಳಿಂದ ಸಂದೇಶ

Published On :

ಗುಲ್ಬರ್ಗ: ಸ್ವೀಪ್ ಕಾರ್ಯಕ್ರಮದ ನಿಮಿತ್ತ ವಿಧಾನಸಭೆ ಚುನಾವಣೆಗಿಂತ ಮೊದಲು ಶಾಲಾ ಮಕ್ಕಳಿಂದ ಮತದಾರರೇ ಮತದಾನ ಮಾಡಿ ಎನ್ನುವ ಸಂದೇಶವನ್ನು ಶಾಲಾ ಮಕ್ಕಳ ಮೂಲಕ ಅವರವರ ಪಾಲಕರಿಗೆ ತಿಳಿಸುವ ಕಾರ್ಯಕ್ರಮವನ್ನು ಏ.25ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ. ಜಯರಾಮು ತಿಳಿಸಿದ್ದಾರೆ. ಸದರಿ ದಿನದಂದು ಜಿಲ್ಲೆಯ ಎಲ್ಲ ತಾಲೂಕುಗಳ ಪ್ರಾಥಮಿಕ, ಮಾಧ್ಯಮಿಕ ಶಾಲೆಗಳನ್ನು ಕರ್ತವ್ಯದಲ್ಲಿರಿಸಿ ಶಾಲಾ ಮಕ್ಕಳು, ಶಿಕ್ಷಕರು ಕರ್ತವ್ಯ ನಿರ್ವಹಿಸುವಂತೆ ಉಪನಿರ್ದೇಶಕರು ಸೂಚಿಸಿದ್ದಾರೆ.
ಶಾಲಾ ಮಕ್ಕಳಿಂದ ಎಲ್ಲ ಮತದಾರರು ಮತದಾನದಲ್ಲಿ ಭಾಗವಹಿಸುವ ಕುರಿತು ಮಕ್ಕಳಿಂದ ಗ್ರಾಮದಲ್ಲಿ ಜಾಥಾ ಏರ್ಪಡಿಸಿ ಮತದಾರರಿಗೆ ಮತದಾನದಲ್ಲಿ ಭಾಗವಹಿಸುವ ಕುರಿತು ಒಂದು ಸಂದೇಶವನ್ನು ಸಾರಬೇಕಿದೆ.
ಅದರಂತೆ ಜಾಥಾದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಪಾಲಕರಿಂದ ಪ್ರತಿಜ್ಞಾವಿಧಿ 'ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಅಥವಾ ಯಾವುದೇ ಪ್ರೇರಣಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ' ಎಂದು ಪ್ರಮಾಣೀಕರಿಸಿದ ಪ್ರಮಾಣ ಪತ್ರದ ಮೇಲೆ ಶಾಲಾ ಮಕ್ಕಳ ಪಾಲಕರಿಂದ ಸಹಿ ಮಾಡಿಸಿ ಸಂಬಂಧಪಟ್ಟ ಶಾಲೆಯ ಮುಖ್ಯಗುರುಗಳು, ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಲ್ಲಿಸಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.