ಗುಲ್ಬರ್ಗಾ

60 ಲೀ. ಹೆಂಡ ವಶ

Published On :

ಯಾದಗಿರಿ: ತಾಲೂಕಿನ ಕೊಂಕಲ್ ಗ್ರಾಮದಲ್ಲಿ ದಾಳಿ ನಡೆಸಿದ ಅಬಕಾರಿ ಇಲಾಖೆ ಸಿಬ್ಬಂದಿ ಅಕ್ರಮವಾಗಿ ಹೆಂಡ ಮಾರಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಆತನಿಂದ 60 ಲೀಟರ್ ಹೆಂಡ ವಶಕ್ಕೆ ತೆಗೆದುಕೊಂಡಿದ್ದಾರೆ. ಸಿದ್ದರಾಮಪ್ಪ ಭೀಮರಾಯ ಬಂಧಿತ ಆರೋಪಿ. ಅಬಕಾರಿ ಆಯುಕ್ತ ಎಸ್.ಕೆ. ಕುಮಾರ ಮಾರ್ಗದರ್ಶನದಲ್ಲಿ ಅಧಿಕಾರಿಗಳಾದ ಶಾಂತೇಶ, ಸಾದಿಕ್ ಹುಸೇನ್, ಫ್ಲೈಯಿಂಗ್ ಸ್ಕ್ವಾಡ್‌ನ ಬಲಭೀಮ ಕಾಂಬ್ಳೆ ಹಾಗೂ ಎಂಸಿಸಿ ತಂಡದ ಜಿ.ಎಸ್.ಪಾಟೀಲ್ ದಾಳಿ ನಡೆಸಿದ್ದರು. ಆರೋಪಿಯನ್ನು ಬಂಧಿಸಿ, ಅಬಕಾರಿ ವಿಶೇಷ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಿಬ್ಬಂದಿ ರಾಮೇಶ್ವರ, ಮೋಹನರೆಡ್ಡಿ, ಅಶೋಕ, ರಾಚಯ್ಯ ಇದ್ದರು.
ಅಪಘಾತ; 2 ಸಾವು
ಯಾದಗಿರಿ: ಅಡ್ಡಾದಿಡ್ಡಿ ಕಾರು ಚಾಲನೆಯಿಂದ ಪಾದಚಾರಿ ಹಾಗೂ ಬೈಕ್ ಸವಾರ ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ನಗರದ ಹೊಸಳ್ಳಿ ಕ್ರಾಸ್ ಬಳಿ ಬುಧವಾರ ಸಂಭವಿಸಿದೆ. ಬಿಳ್ಹಾರದ ಮಲ್ಲಿಕಾರ್ಜುನ(38) ಹಾಗೂ ರಾಜಸ್ಥಾನ ಮೂಲದ ರಾಕೇಶ(30) ಮೃತಪಟ್ಟ ದುರ್ದೈವಿಗಳು. ಗ್ಯಾರೇಜ್‌ನಿಂದ ಹೊರಬಿದ್ದ ಕಾರು ಹಿಮ್ಮುಖವಾಗಿ ಚಲಿಸಿ ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಜಿತ್ತು ಮತ್ತು ರಾಕೇಶ ಎಂಬವರಿಗೆ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು, ಚಲಿಸುತ್ತಿದ್ದ ಬೈಕ್‌ಗೆ ಬಡಿದಿದೆ. ಇದರಿಂದ ಬೈಕ್‌ನಲ್ಲಿದ್ದ ಬಿಳ್ಹಾರದ ಮಲ್ಲಿಕಾರ್ಜುನ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತೀವ್ರ ಗಾಯಗೊಂಡಿದ್ದ ರಾಕೇಶ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಅಪಘಾತ ನಡೆಸಿದ ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಡಿಎಸ್ಪಿ ಎಸ್.ಬಿ. ಕಟ್ಟಿಮನಿ, ಸಿಪಿಐ ಶಂಕರಗೌಡ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು. ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾದಚಾರಿ ಸಾವು
ಯಾದಗಿರಿ: ವಾಯು ವಿಹಾರಕ್ಕೆ ಹೋದ ಸಂದರ್ಭದಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ನಗರದ ಹೊರವಲಯದಲ್ಲಿ ಜರುಗಿದೆ. ಗುಲಾಮ ಮಹಿಬೂಬ್ ಪರಾಜ (60) ಮೃತಪಟ್ಟವರು. ಗಂಗಾ ನಗರದ ಹತ್ತಿರ ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದಾಗ ಎದುರಿನಿಂದ ಬತ್ತದ ರಾಶಿ ಯಂತ್ರವನ್ನು ಸಾಗಿಸುತ್ತಿದ್ದ ವಾಹನ ಇವರಿಗೆ ಡಿಕ್ಕಿ ಹೊಡೆದು ಘಟನೆ ಜರುಗಿದೆ. ವಾಹನ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ನಗರ ಠಾಣೆಯಲ್ಲಿ ದಾಖಲಾಗಿದೆ. ಸುದ್ದಿ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ್ ತುನ್ನೂರು, ಲಾಯಕ ಹುಸೇನ್, ಶೇಖ ಜಹಿರುದ್ದೀನ್, ಮಾಣಿಕರಡ್ಡಿ ಕುರಕುಂದಿ ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಬದಲಾವಣೆಗೆ ಆಗ್ರಹ
ಶಹಾಪುರ: ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಎಂಸಿಸಿ ತಂಡದ ಬಗ್ಗೆ ತಮಗೆ ಅನುಮಾನವಿದ್ದು, ಅವರನ್ನು ತಕ್ಷಣ ಬದಲಾಯಿಸಿ ಬೇರೆ ಜಿಲ್ಲೆ ಅಧಿಕಾರಿಗಳನ್ನು ಈ ತಂಡಕ್ಕೆ ನೇಮಕ ಮಾಡಬೇಕೆಂದು ಕೆಜೆಪಿ ಅಭ್ಯರ್ಥಿ ಗುರುಪಾಟೀಲ ಶಿರವಾಳ ಚುನಾವಣಾಧಿಕಾರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.