ಗುಲ್ಬರ್ಗಾ

ರಾಜ್ ಕನ್ನಡದ ಧ್ರುವತಾರೆ

Published On :

ಯಾದಗಿರಿ:  ಡಾ. ರಾಜಕುಮಾರ್ ಅವರು ಕನ್ನಡ ಚಿತ್ರರಂಗದ ಧ್ರುವತಾರೆ. ಅವರೊಬ್ಬ ವರನಟರಾಗಿದ್ದು, ಇಂದಿನ ಯುವಕರಿಗೆ ಅವರು ಪ್ರೇರಣೆಯಾಗಿದ್ದಾರೆ. ಅವರ ಸಾಮಾಜಿಕ ಕಳಕಳಿ, ಮಾನವೀಯ ಗುಣ ಮುಂತಾದ ಆದರ್ಶಗಳನ್ನು ಯುವಕರು ಮೈಗೂಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ಮಲ್ಲಯ್ಯ ಗುಂಡಗುರ್ತಿ ಹೇಳಿದರು.
ಚಲನ ಚಿತ್ರಗಳಿಂದಲೂ ಬದಲಾವಣೆ: ಇಲ್ಲಿಯ ಚಿರಂಜೀವಿ ನಗರದಲ್ಲಿ ಬುಧವಾರ ಡಾ. ರಾಜಕುಮಾರ ಅಭಿಮಾನಿಗಳ ಸಂಘದಿಂದ ಏರ್ಪಡಿಸಿದ್ದ ರಾಜ್ ಅವರ 85ನೇ ಹುಟ್ಟು ಹಬ್ಬವನ್ನು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಚಲನಚಿತ್ರದ ಮೂಲಕವೂ ಸಾಮಾಜಿಕ ಬದಲಾವಣೆ ತರಬಹುದು ಎಂಬುದು ರಾಜ್ ಅವರ ಚಿತ್ರಗಳಲ್ಲಿ ಕಾಣಬಹುದು. ಕುಟುಂಬ ಸದಸ್ಯರೆಲ್ಲ ಸೇರಿ ಸಿನಿಮಾ ನೋಡಬಹುದಿತ್ತು. ಇಂದು ಕಾಲ ಬದಲಾಗಿದ್ದು, ಮಸಾಲಾ ಚಿತ್ರಗಳ ಸಂಖ್ಯೆಯೇ ಹೆಚ್ಚಿದೆ. ಆದ್ದರಿಂದ ಇಂದು ರಾಜ್ ಪ್ರಸ್ತುತ ಎನಿಸಿದ್ದಾರೆ. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನಡೆಯಬೇಕಿದೆ ಎಂದು ಹೇಳಿದರು.
ಹೆಸರಿಡಲು ಶ್ರಮಿಸಿ: ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈದಪ್ಪ ಗುತ್ತೇದಾರ ಮಾತನಾಡಿ, ಡಾ.ರಾಜಕುಮಾರ ಕೇವಲ ನಟರಲ್ಲ, ಅವರು ಕನ್ನಡಕ್ಕಾಗಿ ಹೋರಾಡಿದ ಧೀಮಂತ ನಾಯಕ ಕೂಡ ಹೌದು. ಅವರ ಹುಟ್ಟುಹಬ್ಬ ಆಚರಿಸುತ್ತಿರುವುದು ಸಂತೋಷದ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ನಗರದ ಉದ್ಯಾನವನ, ವೃತ್ತಗಳಿಗೆ ಅವರ ಹೆಸರು ಇಡಲು ಸಂಘ ಶ್ರಮಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸ್ವೀಪ್ ಕಮಿಟಿಯಿಂದ ಮತದಾನದ ಜಾಗೃತಿ ಮೂಡಿಸುವ ಕರಪತ್ರಗಳನ್ನು ವಿತರಿಸಲಾಯಿತು. ಅಭಿಮಾನಿ ಸಂಘದ ರಾಘವೇಂದ್ರ ಗುತ್ತೇದಾರ, ಪ್ರವೀಣ, ಶ್ರೀಧರ, ಪ್ರಭು, ಶರಣು, ಶೀವು, ಸೂಗಪ್ಪ ಪಾಟೀಲ್ ಇತರರು ಇದ್ದರು. ಮಕ್ಕಳು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.