ಉತ್ತಮ ಅಭ್ಯರ್ಥಿ ಆಯ್ಕೆಗಿದು ಸಕಾಲ: ಡಾ. ಮುದ್ನಾಳ
ಕನ್ನಡಪ್ರಭ ವಾರ್ತೆ, ಯಾದಗಿರಿ, ಏ.25
ಯಾದಗಿರಿ ಮತಕ್ಷೇತ್ರ ವ್ಯಾಪ್ತಿಯ ಗ್ರಾಮಗಳು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಆದ್ದರಿಂದ ಈಗ ಕೆಲಸ ಮಾಡುವ ವ್ಯಕ್ತಿಯನ್ನು ಆಯ್ಕೆ ಮಾಡುವ ಕಾಲ ಬಂದಿದೆ. ಮತದಾರರು ಯೋಚಿಸಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿ ಎಂದು ಕೆಜೆಪಿ ಅಭ್ಯರ್ಥಿ ಡಾ. ವೀರಬಸವಂತರೆಡ್ಡಿ ಮುದ್ನಾಳ ಹೇಳಿದರು.
ಮತಕ್ಷೇತ್ರದ ಪಗಲಾಪುರ ಹಾಗೂ ಮುಷ್ಟೂರ ಗ್ರಾಮಗಳಲ್ಲಿ ಗುರುವಾರ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಈಗ ಕಾಲ ಕೂಡಿಬಂದಿದ್ದು, ಮತದಾರರು ಮತ್ತೊಮ್ಮೆ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ವಿಫಲವಾದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ ಎಂದರು.
ಅಭಿವೃದ್ಧಿಗಾಗಿ ಕೆಜೆಪಿ ಬೆಂಬಲಿಸಿ: ಯಾದಗಿರಿ ಮತಕ್ಷೇತ್ರದಲ್ಲಿ 20 ವರ್ಷ ಶಾಸಕರಾಗಿದ್ದ ಡಾ. ಮಾಲಕರಡ್ಡಿಯವರ ಸಾಧನೆ ಏನೆಂಬುದು ಜನರಿಗೆ ಈಗ ಗೊತ್ತಾಗಿದೆ. ಅಭಿವೃದ್ಧಿ ಕಾರ್ಯ ಕೈಗೊಳ್ಳದೇ ಕ್ಷೇತ್ರದ ಜನತೆಗೆ ದ್ರೋಹ ಬಗೆದಿದ್ದಾರೆ. ಇದರಿಂದ ಮತಕ್ಷೇತ್ರದಲ್ಲಿ ಸಮಸ್ಯೆಗಳು ತಾಂಡವಾಡುತ್ತಿದೆ. ಇನ್ನಾದರೂ ಮತದಾರರು ತಮ್ಮ ಮನಸ್ಥಿತಿಯನ್ನು ಬದಲಿಸಿಕೊಂಡು ಅಭಿವೃದ್ಧಿಗೆ ಪಣ ತೊಟ್ಟಿರುವ ಕೆಜೆಪಿಯನ್ನು ಬೆಂಬಲಿಸಿ ಎಂದರು.
ಮಾಜಿ ಸಿಎಂ ಯಡಿಯೂರಪ್ಪನವರು ಅಭಿವೃದ್ಧಿಪರ ಯೋಜನೆಗಳನ್ನು ಜಾರಿಗೆ ತಂದರಲ್ಲದೆ ಅವುಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ಧಾರೆ. ನುಡಿದಂತೆ ನಡೆಯುವ ಏಕೈಕ ನಾಯಕರು ಅವರಾಗಿದ್ದಾರೆ. ಯಾದಗಿರಿಯನ್ನು ಜಿಲ್ಲೆಯನ್ನಾಗಿ ಮಾಡಿ ಈ ಭಾಗದ ಜನತೆಯ ಕನಸನ್ನು ನನಸು ಮಾಡಿದ್ದಾರೆ. ಅವರ ಅಭಿವೃದ್ಧಿ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಕೆಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಬಡಿದಾಟ: ಯಡಿಯೂರಪ್ಪನವರಿಲ್ಲದ ಬಿಜೆಪಿ ಬಡವಾಗಿದೆ. ಕಾಂಗ್ರೆಸ್ನಲ್ಲಿ ಈಗಲೇ ಸಿಎಂ ಕುರ್ಚಿಗಾಗಿ ಬಡಿದಾಟ ಶುರುವಾಗಿದೆ. ಆದ್ದರಿಂದ ರಾಜ್ಯದ ಅಭಿವೃದ್ಧಿಗೆ ಯಡಿಯೂರಪ್ಪನವರು ಪ್ರಸ್ತುತರಾಗಿದ್ದಾರೆ. ಕೆಜೆಪಿ ಬೆಂಬಲಿಸುವ ಮೂಲಕ ಅವರ ಕೈ ಬಲಪಡಿಸಬೇಕು. ಕೃಷಿಕರು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲ ವರ್ಗದ ಜನರ ಶ್ರೇಯೋಭಿವೃದ್ಧಿಗಾಗಿ ಕೆಜೆಪಿಗೆ ಮತ ನೀಡಿ ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿ ಎಂದು ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

