ಮತದಾನ ಜಾಗೃತಿ ಅಭಿಯಾನ
ಕನ್ನಡಪ್ರಭ ವಾರ್ತೆ ಚಿತ್ತಾಪುರ ಏ.25
ವಿದ್ಯಾರ್ಥಿಗಳು ಅಕ್ಕಪಕ್ಕದ ಮನೆಗಳಿಗೆ ಹೋಗಿ ಅಲ್ಲಿಯ ಪಾಲಕರಿಗೆ ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯರಾಂ ಹೇಳಿದರು.
ಇಲ್ಲಿನ ಜಿಎಂಪಿಎಸ್ ಶಾಲೆ ಆವರಣದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನದಲ್ಲಿ ಕಡ್ಡಾಯ ಮತದಾನ ಮಾಡಿಸುವಂತೆ ಮಕ್ಕಳಿಗೆ ಪ್ರಮಾಣ ವಚನ ಬೋಧಿಸಿ ಚಾಲನೆ ನೀಡಿ ಮಾತನಾಡಿದರು.
ಮತದಾನ ಹಕ್ಕು ಕಡ್ಡಾಯವಾಗಿ ಚಲಾಯಿಸಿ, ನೋಟಿಗಾಗಿ ಓಟು ಬೇಡ. ಯಾವುದೇ ಆಸೆ ಆಮಿಷಕ್ಕೆ ಬಲಿಯಾಗದೆ ನಿರ್ಭಿತಿಯಿಂದ ಮತದಾನ ಮಾಡುವಂತೆ ಪಾಲಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಶಿಕ್ಷಕರು ಸಂಜೆ ಮಕ್ಕಳಿಂದ ಜಾಥಾ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು. ಪಾಲಕರಿಗೆ ಕಡ್ಡಾಯ ಮತದಾನದ ಬಗ್ಗೆ ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಸರ್ವ ಶಿಕ್ಷಣ ಅಭಿಯಾನದ ನೋಡಲ್ ಅಧಿಕಾರಿ ಮದರಖಾನ್, ತಾಲೂಕು ಕ್ಷೇತ್ರ ಸಮನ್ವಯಧಿಕಾರಿ ಸಿದ್ದವೀರಯ್ಯ, ಶರಣಪ್ಪ ಸಾಳೇರ, ರವಿಂದ್ರ ಅಡಿವೇರ, ಅಬ್ದುಲ್ ಸಲಿಂ, ವಿಜಯಶೇಖರ, ಶಿಕ್ಷಣ ಸಂಯೋಜಕ ಶರಣಬಸ್ಸಪ್ಪ ಸೇರಿದಂತೆ ವಿವಿಧ ಶಾಲೆಯ ಮುಖ್ಯಗುರುಗಳು, ಶಿಕ್ಷಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

