ಗುಲ್ಬರ್ಗಾ

ಹಣ, ಹೆಂಡ ಹಂಚಿಕೆ; ಕ್ರಮಕ್ಕೆ ಒತ್ತಾಯ

Published On :

ಗುಲ್ಬರ್ಗ: ಆಳಂದ ಕ್ಷೇತ್ರದಾದ್ಯಂತ ಅಕ್ರಮ ಮದ್ಯ ಮತ್ತು ಹಣ ವ್ಯಾಪಕವಾಗಿ ಹಂಚಲಾಗುತ್ತಿದ್ದು, ಕೂಡಲೇ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಬಿ.ಆರ್. ಪಾಟೀಲ್ ಒತ್ತಾಯಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ಸ್ಥಳೀಯ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅಕ್ರಮ ಮದ್ಯ ಸಾಗಿಸುತ್ತಿರುವ ವಾಹನ ಸಂಖ್ಯೆ ಹೇಳಿದರೂ ತಪಾಸಣೆ ಮಾಡಿಲ್ಲ. ಹೀಗಾದರೆ ಮುಕ್ತ ಚುನಾವಣೆ ಎದುರಿಸುವುದು ಸಾಧ್ಯವೇ ಎಂದು ಪ್ರಶ್ನಿಸಿದರು.
ಆಳಂದ ತಾಲೂಕಿನಲ್ಲಿ ಇರುವ 18 ಮದ್ಯದ ಅಂಗಡಿಗಳು ಅಕ್ರಮ ಹಣ ಮತ್ತು ಮದ್ಯ ವಿತರಿಸುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ. ಜನರು ಈ ಕೇಂದ್ರಗಳ ಮುಂದೆ ಜಮಾಯಿಸುತ್ತಿದ್ದಾರೆ. ಇದನ್ನು ತಡೆಯುವ ಅಬಕಾರಿ ಅಧಿಕಾರಿಗಳು ಸಮ್ಮನೇ ಕುಳಿತಿದ್ದಾರೆ ಎಂದು ಆರೋಪಿಸಿದರು.
ಶಾಸಕರ ಸಂಬಂಧಿಯೊಬ್ಬರು ಅಬಕಾರಿ ಇಲಾಖೆಯಲ್ಲಿದ್ದು, ಅವರನ್ನೇ ವಿಚಕ್ಷಣಾ ದಳದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಹೀಗಾಗಿ ಕ್ಷೇತ್ರದಲ್ಲಿ ಮುಕ್ತವಾಗಿ ಅಕ್ರಮ ಮದ್ಯ ಮತ್ತು ಹಣ ಹಂಚಿಕೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೆಂದೂ ನೋಡದ ಅಲೆ ಈಗ ಕೆಜೆಪಿ ಪರವಾಗಿದೆ. ಈ ಸಲ ತಮ್ಮ ಗೆಲವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಆಳಂದ ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ ಪಾಟೀಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.