ಗುಲ್ಬರ್ಗಾ

ಚುನಾವಣಾ ಜೀಪ್ ಡಿಕ್ಕಿ: ಬಾಲಕಿಗೆ ಗಾಯ

Published On :

ಚಿಂಚೋಳಿ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಲಕಪಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಜೀಪ್ 9 ವರ್ಷದ ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೂ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಪೋಲಕಪಳ್ಳಿ ಗ್ರಾಮದ ಸರಿತಾ (9) ಎಂಬ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾಳೆ. ಮಧ್ಯಾಹ್ನ ಬಸ್ ನಿಲ್ದಾಣದ ಹತ್ತಿರದಲ್ಲಿದ್ದ ಕಿರಾಣಿ ಅಂಗಡಿಯಲ್ಲಿ ಬಿಸ್ಕತ್ ತರಲು ಹೋಗುತ್ತಿದ್ದಳು. ಚಿಂಚೋಳಿ- ತಾಂಡೂರ ಮುಖ್ಯರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಚಿಂಚೋಳಿ ಸಂಚಾರಿ ತಪಾಸಣಾ ಅಧಿಕಾರಿಗಳ ಜೀಪು ಬಾಲಕಿಗೆ ಡಿಕ್ಕಿ ಹೊಡೆಯಿತು. ಪರಿಣಾಮ ಆಕೆಗೆ ತಲೆಗೆ ತೀವ್ರವಾಗಿ ಗಂಭೀರ ಗಾಯವಾಗಿದೆ. ಆಕೆಯನ್ನು ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ನಂತರ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಪಿಎಸ್‌ಐ ಸುರೇಶ ಬೆಂಡೆಗುಂಬಳ ತಿಳಿಸಿದ್ದಾರೆ. ಬಾಲಕಿ ತಂದೆ ಬಸವರಾಜ ನೀಡಿದ ದೂರಿನ ಮೇರೆಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಡಿವೈಎಸ್ಪಿ ಪರಶುರಾಮ ಕೋರವಾರ, ಸಿಪಿಐ ನಿರಂಜನ್ ಪಾಟೀಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಾಳೆ ಟಿ-20 ಕ್ರಿಕೆಟ್ ಪಂದ್ಯ
ಗುಲ್ಬರ್ಗ: ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ(ಸ್ವೀಪ್) ಕಾರ್ಯಕ್ರಮದ ಅಡಿಯಲ್ಲಿ ಏ.28ರಂದು ಮತದಾರರ ಜಾಗೃತಿಗಾಗಿ ಟಿ-20 ಕ್ರಿಕೆಟ್ ಪಂದ್ಯಾವಳಿಯನ್ನು ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗುವ ಪಂದ್ಯಾವಳಿಯಲ್ಲಿ ಸ್ವೀಪ್- 1, ಸ್ವೀಪ್- 2, ಸ್ವೀಪ್- 3, ಸ್ವೀಪ್- 4 ತಂಡಗಳು ಭಾಗವಹಿಸಲಿವೆ. ಇದಕ್ಕಾಗಿ ಈಗಾಗಲೇ ತಂಡಗಳನ್ನು ಆಯ್ಕೆ ಮಾಡಲಾಗಿದ್ದು, ಬೆಳಗ್ಗೆ 11 ಗಂಟೆಗೆ ಪಂದ್ಯ ಮುಗಿಯಲಿದೆ. ನಗರದ ಸಾರ್ವಜನಿಕರು ಈ ಪಂದ್ಯಾವಳಿ ವೀಕ್ಷಣೆಗೆ ಆಗಮಿಸಬೇಕು ಎಂದು ಸ್ವೀಪ್ ಸಮಿತಿ ಅಧ್ಯಕ್ಷೆ ಪಲ್ಲವಿ ಆಕುರಾತಿ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.