ಗುಲ್ಬರ್ಗಾ

371ನೇ ಕಲಂ ಶ್ರೇಯಸ್ಸು ಕಾಂಗ್ರೆಸ್‌ಗೆ: ಖರ್ಗೆ

Published On :

ಅಫಜಲ್ಪುರ: ಹೈ.ಕ ಭಾಗದ ಬಹುದಿನದ ಬೇಡಿಕೆಯಾಗಿದ್ದ 371ನೇ ಕಲಂ ತಿದ್ದುಪಡಿ ತರಲು ಅಂದಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಎಲ್.ಕೆ. ಅಡ್ವಾನಿ ಸುತಾರಾಂ ಒಪ್ಪಿರಲಿಲ್ಲ. ಆಗ ನಾವು ಮಾಡಿದ್ದೇವೆ ಎನ್ನುವ ನಾಯಕರು ಎಲ್ಲಿಗೆ ಹೋಗಿದ್ದರು ಎಂದು ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.
ಅವರು ಅಫಜಲ್ಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಮಾಲಿಕಯ್ಯ ಗುತ್ತೇದಾರ ಪರ ಪ್ರಚಾರಕ್ಕೆ ಆಗಮಿಸಿ ಬಹಿರಂಗ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಎಲ್ಲ ಕಡೆ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ನೀವು ನಮ್ಮ ಹಣೆ ಬರಹ ಬರೆಯುವವರು. ನೀವು ಮನಸ್ಸು ಮಾಡಿದರೆ ಬದಲಾವಣೆ ಸಾಧ್ಯ ಎಂದರು.
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್, ಕಾಂಗ್ರೆಸ್ ಅಭ್ಯರ್ಥಿ ಮಾಲಿಕಯ್ಯ ಗುತ್ತೇದಾರ, ಮಕ್ಬುಲ್ ಪಟೇಲ್, ಮಹಾಂತೇಶ ಪಾಟೀಲ್ ಮಾತನಾಡಿದರು. ಈ ಸಂದರ್ಭದಲ್ಲಿ ತಾಲೂಕಿನ ಮಾದಿಗ, ಹಡಪದ, ಲಿಂಗಾಯತ ಸಮಾಜಗಳು ಸೇರಿದಂತೆ ನೂರಾರು ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಗಂಗಾಧರ ಸ್ವಾಮೀಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ರೇವೂರ, ಭೀಮಶಾ ದೊಡ್ಮನಿ, ಬಾಬುರಾವ್ ಮುಜಗೊಂಡ, ಫೀರೋಜ್ ಜಾಗಿರದಾರ, ಮಾಜಿ ಉಪಮೇಯರ ಸಂತೋಷ ಪಾಟೀಲ್, ಗುರುಬಾಳ ಜಕಾಪುರ, ಶಂಕ್ರಯ್ಯ ಸ್ವಾಮಿ, ಪಾಶಾ ಮಣ್ಣೂರ, ಪಪ್ಪು ಪಟೇಲ್, ಸಿದ್ದಗೌಡ ಪಾಟೀಲ್ ಭಾಸಗಿ, ತಾಪಂ ಸದಸ್ಯ ಶಿವಪುತ್ರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.