ಗುಲ್ಬರ್ಗಾ

ಮತದಾನ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ

Published On :

ಯಾದಗಿರಿ: ಮತದಾನದ ಮಹತ್ವ ಸಾರಲು ಶುಕ್ರವಾರ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯಲ್ಲಿ ಜಿಲ್ಲಾಧಿಕಾರಿ ಪಿ.ರಾಜೇಂದ್ರ ಚೋಳನ್ ಅವರು ಸ್ವತಃ ಬೈಕ್ ಚಲಾಯಿಸುವ ಮೂಲಕ ರ್ಯಾಲಿಗೆ ಚಾಲನೆ ನೀಡಿದರು.
ಜಿಪಂ ಸಿಇಒ ಎಸ್.ಎ. ಜಿಲಾನಿ ಹಸಿರು ನಿಶಾನೆ ತೋರಿದರು. ಮತದಾನದ ಮಹತ್ವ ಬಗ್ಗೆ ಜಾಗೃತಿ ಮೂಡಿಸಲು ನಗರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ನೂರಾರು ಜನರು ಭಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತ ನಗರ ಪ್ರದಕ್ಷಿಣೆ ಹಾಕಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾದ ರ್ಯಾಲಿ ನಗರದ ಬಸ್ ನಿಲ್ದಾಣ,  ರೇಲ್ವೆ ನಿಲ್ದಾಣ, ಅಂಬೇಡ್ಕರ್ ಭವನ, ಗಂಜ್ ಸರ್ಕಲ್, ಮೈಲಾಪುರ ಬೇಸ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗಾಂಧಿ ಚೌಕ್‌ಗೆ ಆಗಮಿಸಿತು. ನಂತರ ಗಾಂಧಿಚೌಕದಲ್ಲಿ ಮತದಾನ ಮಹತ್ವದ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಪಂ ಸಿಇಒ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.