ಗುಲ್ಬರ್ಗಾ

ಶಿಕ್ಷಕನ ಕಾಮಕ್ಕೆ ವಿದ್ಯಾರ್ಥಿನಿ ಬಲಿ

Published On :

ಗುಲ್ಬರ್ಗ: ವಿದ್ಯಾರ್ಥಿನಿಯೊಬ್ಬಳಿಗೆ ಮದುವೆಯಾಗುವುದಾಗಿ ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿದ ಶಾಲಾ ಶಿಕ್ಷಕನೊಬ್ಬ ಕೊನೆಗೆ ಗರ್ಭಪಾತ ಮಾಡಿಸಿ ವಂಚಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಹೀರಾಪುರ ಕ್ರಾಸ್ ಹತ್ತಿರ ಇರುವ ಶಾಲೆಯೊಂದರ ದೈಹಿಕ ಶಿಕ್ಷಕ ಅನಂತರಾಜ ಎಂಬಾತ ಶಾಲೆಯಲ್ಲಿ 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಬೀದರ್ ಮತ್ತು ಬಿಜಾಪುರದ ಲಾಡ್ಜ್‌ಗಳಿಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದರ ಪರಿಣಾಮ ಆಕೆ ಗರ್ಭವತಿಯಾದಾಗ ಒತ್ತಾಯಪೂರ್ವಕವಾಗಿ ಮಾತ್ರೆಗಳನ್ನು ನೀಡಿ ಗರ್ಭಪಾತ ಮಾಡಿಸಿದ್ದಾನೆ.
ಪುನಃ ಹೆಂಡತಿ ಇಲ್ಲದ ಸಮಯದಲ್ಲಿ ಗುಲ್ಬರ್ಗದ ತನ್ನ ಮನೆಗೆ ಕರೆದೊಯ್ದು ಕಾಮತೃಷೆ ತೀರಿಸಿಕೊಂಡಿದ್ದಾನೆ. ಮತ್ತೆ ಆಕೆ ಗರ್ಭವತಿಯಾದಾಗ ಗರ್ಭಪಾತ ಮಾಡಿಕೋ ಎಂದು ಹೊಟ್ಟೆಗೆ ಒದ್ದು, ಜಾತಿ ನಿಂದನೆ ಮಾಡಿದ್ದಾನೆ ಎಂದು ಬಾಲಕಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.