ಮಟ್ಟಣ್ಣವರಗೆ ಮಹಿಳೆಯರ ಬೆಂಬಲ
ಯಾದಗಿರಿ: ಗಿರೀಶ ಮಟ್ಟಣ್ಣವರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ದಂತಾಪುರ ಸೇರಿದಂತೆ ವಿವಿಧ ಗ್ರಾಮದ ಮಹಿಳೆಯರು ಬಿಜೆಪಿ ಸೇರ್ಪಡೆಯಾದರು.
ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಮಟ್ಟಣ್ಣವರ, ಮಹಿಳೆಯರಿಗೆ ಪ್ರತಿ ಹಳ್ಳಿಯಲ್ಲೂ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಮಹಿಳೆಯರ ಸ್ವಾವಲಂಬನೆಗಾಗಿ ಸ್ವಂತ ಉದ್ಯೋಗ ಇವು ನನ್ನ ಪ್ರಮುಖ ಗುರಿಯಾಗಿದೆ. ಇದನ್ನು ಸಾಧಿಸಿಯೇ ತೀರುತ್ತೇನೆ.
ಮೂಲ ಸೌಲಭ್ಯಗಳ ಕೊರತೆಯಿಂದ ಕ್ಷೇತ್ರ ನರಳುತ್ತಿದೆ. ಮಹಿಳೆಯರು ಬಹಿರ್ದೆಸೆಗೆ ಬಯಲಿಗೆ ಹೋಗುವ ಮುಜುಗರ ಎದುರಿಸುತ್ತಿದ್ದಾರೆ. ಈ ಹಿಂದಿನ ಶಾಸಕರು ಕ್ಷೇತ್ರವನ್ನು ಎಷ್ಟು ಉದ್ಧಾರ ಮಾಡಿದ್ದಾರೆ ಎನ್ನುವುದು ಇದರಿಂದಲೇ ಗೊತ್ತಾಗುತ್ತದೆ. ಆದ್ದರಿಂದ ಈ ಬಾರಿ ಬಿಜೆಪಿಗೆ ಮತ ನೀಡುವ ಮೂಲಕ ನನ್ನನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು. ದಂತಾಪುರ ಗ್ರಾಮದ ಚನ್ನಬಸಮ್ಮ, ಮಲ್ಲಮ್ಮ, ಸತ್ಯಮ್ಮ, ಪಾರ್ವತಮ್ಮ, ಚನ್ನಮ್ಮ, ಲಕ್ಷ್ಮಮ್ಮ, ಶಂಕ್ರಮ್ಮ, ಬುಜ್ಜಮ್ಮ, ಆಶಮ್ಮ, ಸಾವಿತ್ರಮ್ಮ, ಅನಂತಮ್ಮ, ಶಂಕ್ರಮ್ಮ, ವೆಂಕಟಮ್ಮ, ಪದ್ಮಮ್ಮ, ಕಾಶಮ್ಮ, ನರಸಿಂಗಮ್ಮ ಸೇರಿದಂತೆ ಅನೇಕ ಮಹಿಳೆಯರು ಬಿಜೆಪಿ ಸೇರ್ಪಡೆಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

