ಕಾಂಗ್ರೆಸ್ನಿಂದ ಮಾತ್ರ ಸ್ಥಿರ ಸರ್ಕಾರ
ಸುರಪುರ: ರಾಜ್ಯದಲ್ಲಿ ಸುಭದ್ರ ಸರ್ಕಾರವಿಲ್ಲದಿದ್ದರೆ ಏನಾಗಬಹುದು ಎಂಬುದನ್ನು ಕಳೆದ ಐದು ವರ್ಷದಲ್ಲಿ ಜನರು ನೋಡಿದ್ದಾರೆ. ಆದ್ದರಿಂದ ಸುಭದ್ರ ಸರ್ಕಾರಕ್ಕಾಗಿ ಕಾಂಗ್ರೆಸ್ ಬೆಂಬಲಿಸಬೇಕು ಎಂದು ಅಭ್ಯರ್ಥಿ ರಾಜಾ ವೆಂಕಟಪ್ಪನಾಯಕ ಕರೆ ನೀಡಿದರು.
ತಾಲೂಕಿನ ಜುಮಾಲಪುರ ತಾಂಡಾದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿ, ಐದು ವರ್ಷಗಳಿಂದ ಬಿಜೆಪಿ ಸರ್ಕಾರ ಸಿಎಂ ಸ್ಥಾನಕ್ಕಾಗಿ ಗುದ್ದಾಟ ಮಾಡಿತೇ ಹೊರತು ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ. ಬಿಜೆಪಿ ಸರ್ಕಾರ ಸ್ವಜನ ಪಕ್ಷಪಾತ, ಗಣಿ ಹಗರಣ, ಭ್ರಷ್ಟಾಚಾರಗಳಲ್ಲಿ ತೊಡಗಿ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿತು. ಸಾಮಾನ್ಯ ಜನರ ಕುಂದು-ಕೊರತೆಗಳ ಪರಿಹರಿಸುವಿಕೆಗೆ ಗಮನಹರಿಸಲಿಲ್ಲ ಎಂದು ದೂರಿದರು. ಸಾಲ ಮಾಡಿ ನೊಂದ ರೈತರ ಮುಖದಲ್ಲಿ ಮಂದಹಾಸ ಮೂಡಿಸುವ ವಿಶ್ವಾಸದಲ್ಲಿ ರು. 72 ಸಾವಿರ ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರದ ಯುಪಿಎ ಸರ್ಕಾರ ಜನಪರ ಆಡಳಿತ ನೀಡಿದ್ದು, ಗ್ರಾಮೀಣ ಕೂಲಿ ಕಾರ್ಮಿಕರಿಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮೂಲಕ ಗ್ರಾಮಗಳ ಜನತೆ ಗುಳೆ ಹೋಗದಂತೆ ಕ್ರಮ ಕೈಗೊಂಡಿದೆ ಎಂದರು.
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಹತ್ತಾರು ಸಮಸ್ಯೆಗಳನ್ನು ಈಡೇರಿಸುವಂತೆ ಜನತೆ ಬೇಡಿಕೆ ಇಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ತಾವು ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶಗಳ ಮೂಲಸೌಲಭ್ಯಕ್ಕೆ ಒತ್ತು ನೀಡುವುದಾಗಿ ಭರವಸೆ ನೀಡಿದರು.
ಮುಖಂಡರಾದ ಶಿವಣ್ಣ ಮಂಗೀಹಾಳ, ಸೂಲಪ್ಪ ಕಮತಗಿ, ಬಸನಗೌಡ ಯಡಿಯಾಪುರ, ರಾಜಶೇಖರಗೌಡ ವಜ್ಜಲ್, ತಿಪ್ಪರಾಜಗೌಡ ಬಾಚಿಮಟ್ಟಿ, ಪ್ರಭುಗೌಡ ಪಾಟೀಲ್, ಸೋಮಶೇಖರ ಶಾಬಾದಿ, ಡಾ.ಶರಣಪ್ಪ ಯಾಳಗಿ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

