ಗುಲ್ಬರ್ಗಾ

ಬಂಜಾರ ಸಮುದಾಯ ಅಭಿವೃದ್ಧಿಗೆ ಬಿಜೆಪಿಯಿಂದ ಹಲವು ಯೋಜನೆ

Published On :

ಯಾದಗಿರಿ: ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಬಂಜಾರ ಸಮುದಾಯದವರಿಗೆ ನೂರಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇತರ ಪಕ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸಮುದಾಯದವರ ಅಭಿವೃದ್ಧಿಗೆ ಬಿಜೆಪಿ ಶ್ರಮಿಸಿದೆ ಎಂದು ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ ಮಾಗನೂರ ಹೇಳಿದರು.
  ಭಾನುವಾರ ಮತಕ್ಷೇತ್ರದ ಗೋಟಗಿ ತಾಂಡಾ, ಮುಂಡರಗಿ ತಾಂಡಾ ಮತ್ತು ಅರಿಕೇರಾ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದರು. ಬಂಜಾರ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದಿಂದ ಹತ್ತು ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು, ಕಳೆದ 40 ವರ್ಷಗಳಿಂದ ಆಡಳಿತ ನಡೆಸಿದ ಕಾಂಗ್ರೆಸ್ ಮತ್ತು ಜನತಾದಳ ಸರ್ಕಾರಗಳು ಬಂಜಾರ ಸಮುದಾಯವನ್ನು ನಿರ್ಲಕ್ಷಿಸಿವೆ ಎಂದರು.
  ಸರ್ಕಾರದಿಂದಲೇ ಮಹರ್ಷಿ ವಾಲ್ಮೀಕಿ, ಕನಕ ಮತ್ತು ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಣೆ ಮಾಡಲು ಬಿಜೆಪಿ ಸರ್ಕಾರ ಕ್ರಮ ತೆಗೆದುಕೊಂಡಿದೆ.
 ಅದರಂತೆ ನಾನು ಆಯ್ಕೆಯಾಗಿ ಬಂದಲ್ಲಿ ಬಂಜಾರ ಸಮುದಾಯದ ಆರಾಧ್ಯದೈವ ಸಂತ ಸೇವಾಲಾಲ್ ಜಯಂತಿಯನ್ನು ಸರ್ಕಾರದಿಂದಲೇ ಆಚರಣೆ ಮಾಡಲು ಹೋರಾಟ ಮಾಡುವುದಾಗಿ ಭರವಸೆ ನೀಡಿದರು.
ಯಾದಗಿರಿಯಲ್ಲೇ ವಾಸ: ಯಾದಗಿರಿ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸುವ ಬಯಕೆಯನ್ನು ಹೊತ್ತು ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ.
 ಇನ್ನು ಮುಂದೆ ನನ್ನ ವಾಸ ಯಾದಗಿರಿಯಲ್ಲಿಯೇ. ಹೀಗಾಗಿ ಮತದಾರರು ನನ್ನನ್ನು ಹೊರಗಿನವನೆಂದು ತಿಳಿಯದೇ ನನ್ನ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.
ವೆಂಕಟರಡ್ಡಿ ಅಬ್ಬೆತುಮಕೂರ, ಭೀಮು ಕುರಕುಂದಿ, ರವಿ ಕೆ.ಮುದ್ನಾಳ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.