6 ತಿಂಗಳಲ್ಲಿ ಲೋಕಸಭೆಗೆ ಚುನಾವಣೆ
ಅಫಜಲ್ಪುರ: ದೇಶದಲ್ಲಿ ಜನರು ಆಹಾರವಿಲ್ಲದೆ ಸಾಯುತ್ತಿದ್ದಾರೆ. ಯುಪಿಎ ಸರ್ಕಾರ ಬಡವರ ಏಳಿಗೆಗೆ ಶ್ರಮಿಸದೆ ಬೆಲೆ ಏರಿಕೆ, 2ಜಿ ಸ್ಪೆಕ್ಟ್ರಂ ಸೇರಿದಂತೆ ಮುಂತಾದ ಹಗರಣಗಳಲ್ಲಿ ಸಿಲುಕಿ ಬಡವರಿಗೆ ಹಾಗೂ ದೇಶಕ್ಕೆ ಮಾರಕವಾಗಿದೆ. ಯುಪಿಎ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ಆರು ತಿಂಗಳಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರು ಭವಿಷ್ಯ ನುಡಿದರು. ಅವರು ಪಟ್ಟಣದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಗೊವಿಂದ ಭಟ್ಟ ಪರವಾಗಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, 'ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಅಲ್ಲದೆ, ಅಫಜಲ್ಪುರ ಮತಕ್ಷೇತ್ರ ಉತ್ತರ ಪ್ರದೇಶದ ಮಾದರಿಯಂತೆ ಬದಲಾವಣೆ ಮಾಡುತ್ತೇನೆ ಎಂದೂ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

