ಗುಲ್ಬರ್ಗಾ

ಕಾಂಗ್ರೆಸ್‌ಗೆ ಮಾತ್ರ ಬಡವರ ಬಗ್ಗೆ ನೈಜ ಕಾಳಜಿ: ಖರ್ಗೆ

Published On :

ಕ.ಪ್ರ.ವಾರ್ತೆ  ,   ಯಾದಗಿರಿ  ,   ಏ. 30
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಹಲವು ಹಗರಣ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದೆ. ಕಾಂಗ್ರೆಸ್‌ಗೆ ಮಾತ್ರ ಬಡವರ ಬಗ್ಗೆ ಕಾಳಜಿಯಿದೆ. ಅದಕ್ಕಾಗಿ ಅವರ ಏಳ್ಗೆಗೆ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಪಕ್ಷಕ್ಕೆ ಮತ ಹಾಕಿ ಎಂದು ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದರು.
ಗುರುಮಠಕಲ್ ಕ್ಷೇತ್ರದ ಅಭ್ಯರ್ಥಿ ಬಾಬುರಾವ ಚಿಂಚನಸೂರ ಪರ ಮತಯಾಚಿಸಿ ಅವರು ಮಾತನಾಡಿದರು. ಈ ಭಾಗದ ಅಭಿವೃದ್ಧಿಗಾಗಿ 371(ಜೆ)ನೇ ಕಲಂ ವಿಶೇಷ ಕಾನೂನು ಜಾರಿಗೆ ತರಲಾಗಿದೆ. ಗುರುಮಠಕಲ್ ನನ್ನ ಕರ್ಮ ಭೂಮಿಯಾಗಿದ್ದು, ಇದರ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ಅದಕ್ಕಾಗಿ ಈ ಸಲ ನಮ್ಮ ಪಕ್ಷಕ್ಕೆ ಮತ ಹಾಕಿ. ಹಾಲಿ ಶಾಸಕರಿಂದ ಕ್ಷೇತ್ರದಲ್ಲಿ ಕೆಲವು ಲೋಪದೋಷಗಳು ಆಗಿದ್ದು, ಕಾರ್ಯಕರ್ತರಲ್ಲಿ ಅಸಮಾಧಾನ ಇರುವುದು ತಿಳಿದು ಬಂದಿದೆ. ಬರುವ ದಿನಗಳಲ್ಲಿ ಅವುಗಳನ್ನು ಸರಿಪಡಿಸಿ ಒಗ್ಗಟ್ಟಿನಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
ಮಾದರಿ ಕ್ಷೇತ್ರ- ಭರವಸೆ: ಅಭ್ಯರ್ಥಿ ಬಾಬುರಾವ ಚಿಂಚನಸೂರ ಮಾತನಾಡಿ, ಕಾರ್ಮಿಕ ಸಚಿವರ ಮಾರ್ಗದರ್ಶನದಲ್ಲಿ ಗುರುಮಠಕಲ್ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ. ಅಲ್ಲದೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಮತ್ತು ಯುವಕರಿಗೆ ಉದ್ಯೋಗ ಅವಕಾಶ ಒದಗಿಸಲು ಪ್ರಾಮಾಣಿಕ ಕೆಲಸ ಮಾಡುವೆ ಎಂಬ ಭರವಸೆ ನೀಡಿದರು. ಆದ್ದರಿಂದ ಈ ಬಾರಿ ಕಾಂಗ್ರೆಸ್‌ಗೆ ಮತ ಹಾಕುವ ಮೂಲಕ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಶರಣಿಕಕುಮಾರ ದೋಖಾ, ಜಿಲ್ಲಾ ಅಧ್ಯಕ್ಷ ಮರಿಗೌಡ ಹುಲಕಲ್, ಭೀಮರೆಡ್ಡಿ ಶೆಟ್ಟಳ್ಳಿ, ಮಹಿಪಾಲರೆಡ್ಡಿ ಹತ್ತಿಕುಣಿ, ಮಹಿಪಾಲರೆಡ್ಡಿ ದುಪ್ಪಲ್ಲಿ, ಜಿ.ನಾರಯಣರಾವ, ವಿಶ್ವನಾಥ ನೀಲಹಳ್ಳಿ, ನಾಗನಾಥರಾವ ತೊಟ್ಲೂರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.