ಬಿಎಸ್ವೈಗೆ ಸೋಲು ಖಚಿತ
ಯಾದಗಿರಿ: ಶಿವಮೊಗ್ಗದಲ್ಲಿ ನಾನು ಸೋಲುತ್ತೇನೆ ಎಂದು ಹೇಳುತ್ತಿರುವ ಯಡಿಯೂರಪ್ಪನವರು ಮೊದಲು ಶಿಕಾರಿಪುರದಲ್ಲಿ ಗೆದ್ದು ತೋರಿಸಲಿ. ಅವರು ಅಲ್ಲಿ ಸೋಲುವುದು ಖಚಿತ. ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರೇ ನನ್ನ ಪರ ಪ್ರಚಾರ ನಡೆಸಿ ಗೆಲ್ಲಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಈಶ್ವರಪ್ಪ ತಿರುಗೇಟು ನೀಡಿದರು.
ಗುರುಮಠಕಲ್ನಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ ಈ ರೀತಿ ಪ್ರತಿಕ್ರಿಯಿಸಿದರು. ಯಡಿಯೂರಪ್ಪನವರು ರಾಜಕೀಯ ದೊಂಬರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ಕೂಡ ಕಚ್ಚಾಟದಲ್ಲೇ ತೊಡಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳುವ ಮೂಲಕ ಗೋಹತ್ಯೆ ಮಾಡುವುದಾಗಿ ಸಿದ್ದರಾಮಯ್ಯ ಬಹಿರಂಗವಾಗಿ ಒಪ್ಪಿಕೊಂಡಂತಾಗಿದೆ. ಈ ಮೂಲಕ ಸಿದ್ದರಾಮಯ್ಯ ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಯಾವ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಕಾದು ನೋಡೋಣ. ಸಿದ್ದರಾಮಯ್ಯ, ಪರಮೇಶ್ವರ, ಖರ್ಗೆ, ಜಾಫರ್ ಷರೀಫ್ ಕಾಂಗ್ರೆಸ್ಸೋ ನೋಡೋಣ. ಸಿದ್ದರಾಮಯ್ಯ, ಪರಮೇಶ್ವರ ಪರಸ್ಪರರು ಕಾಲೆಳೆದು ಕೊಂಡು ಸೋಲಲಿದ್ದಾರೆ. ಸಿದ್ದರಾಮಯ್ಯ ಅಧಿಕಾರ ಇದ್ದಲ್ಲಿ ಮಾತ್ರ ಉಳಿ ಯುತ್ತಾರೆ ಎಂದು ವ್ಯಂಗ್ಯವಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

