ವಸತಿ ನಿಲಯ ಕಾಮಗಾರಿ ಪೂರ್ಣಗೊಳ್ಳುವುದೇ?
ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮ ಹಾಗೂ ಸುತ್ತಮತ್ತಲಿನ ಅಲ್ಪಸಂಖ್ಯಾತರ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಉದ್ದೇಶದಿಂದ ಸರ್ಕಾರ ಮಲ್ಟಿಸೆಕ್ಟರ್ ಮೈನರಟಿ ಯೋಜನೆ ಅಡಿಯಲ್ಲಿ 2010-11ನೇ ಸಾಲಿನಲ್ಲಿ ಮಂಜೂರಾಗಿ ಕಾಮಗಾರಿ ಪ್ರಾರಂಭಗೊಂಡಿದ್ದು, ಕಾಮಗಾರಿಯು ಆಮೇಗತಿಯಲ್ಲಿ ನಡೆದಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಕರವೇ ದಂಡೋತಿ ಗ್ರಾಮ ಘಟಕ ಅಧ್ಯಕ್ಷ ಸಾಬಣ್ಣ ಭರಾಟಿ, ಈರಣ್ಣ ಕೊಳ್ಳಿ, ರಂಗನಾಥ ಜಿರಕಿ ಆರೋಪಿಸಿದ್ದಾರೆ.
ದಂಡೋತಿ, ಇವಣಿ, ಗುಂಡಗುರ್ತಿ, ತೆಂಗಳಿ ಸೇರಿದಂತೆ ಸುತ್ತಲಿನ ಅಲ್ಪಸಂಖ್ಯಾತರ ಅನುಕೂಲಕ್ಕಾಗಿ ಇಲ್ಲಿ ಉರ್ದು ಮಾದ್ಯಮದ ಫ್ರೌಡಶಾಲೆ ಇರುವುದರಿಂದ ಸರ್ಕಾರ ಇಲ್ಲಿ ಅವರಿಗಾಗಿ ವಸತಿ ನಿಲಯವನ್ನು ಖಾಸಗಿ ಕಟ್ಟಡದಲ್ಲಿ ಪ್ರಾರಂಭಿಸಿದೆ. ಆದರೆ ನೂತನ ಕಾಮಗಾರಿಯು ಹಲವಾರು ತಿಂಗಳಿಂದ ಮಂದಗತಿಯಲ್ಲಿ ನಡೆಯುತ್ತಿದ್ದರು ಅಧಿಕಾರಿಗಳು ಬೇಗನೆ ಕೆಲಸ ಮುಗಿಸಲು ಕ್ರಮ ಕೈಗೊಳ್ಳದಿರುವುದರಿಂದ ತೊಂದರೆಯಾಗುತ್ತಿದೆ ತಿಳಿಸಿದ್ದಾರೆ.
ಈ ಬಗ್ಗೆ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮಗಾರಿ ಪ್ರಗತಿಯ ಬಗ್ಗೆ ಪರಿಶೀಲಿಸದೆ ಇರುವ ಅಧಿಕಾರಿಗಳ ಧೋರಣಿಯು ಇದೇ ರೀತಿ ಮುಂದುವರಿದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉಗ್ರ ಸ್ವರೂಪದ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

