ಡೋಣಗಾಂವಕ್ಕೆ ಹೆಚ್ಚಿನ ಬಸ್ ಸೌಲಭ್ಯಕ್ಕೆ ಆಗ್ರಹ
ಕನ್ನಡಪ್ರಭ ವಾರ್ತೆ , ಚಿತ್ತಾಪುರ , ಆ.4
ತಾಲೂಕಿನ ಡೋಣಗಾಂವ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತುಂಬಾ ಅನಾನುಕೂಲವಾಗುತ್ತಿದೆ. ಅವರ ಅನುಕೂಲಕ್ಕೆ ಮಧ್ಯಾಹ್ನ ಬಸ್ ಸೌಲಭ್ಯ ಒದಗಿಸಬೇಕೆಂದು ಕರವೇ ವಲಯ ಅಧ್ಯಕ್ಷ ವಿಶ್ವನಾಥ ಬೆಂಕಿ ಆಗ್ರಹಿಸಿದ್ದಾರೆ.
ತಾಲೂಕು ಕೇಂದ್ರವಾದ ಚಿತ್ತಾಪುರಕ್ಕೆ ಸಾತನೂರ, ಹೋಸುರು, ಬಂಕಲಗಾ, ಡೋಣಗಾಂವ, ರಾಜೋಳಾ ಸೇರಿದಂತೆ ಅನೇಕ ಗ್ರಾಮದಿಂದ ನೂರಾರು ವಿದ್ಯಾರ್ಥಿಗಳು ಶಾಲೆ, ಕಾಲೇಜು ವಿದ್ಯಾಭ್ಯಾಸ ಮಾಡಲು ಬರುತ್ತಿದ್ದು, ಅವರಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಮಧ್ಯಾಹ್ನ 2ಕ್ಕೆ ಕಾಲೇಜು ಬಿಡುತ್ತದೆ, ಆದರೆ ಅವರಿಗೆ ವಾಪಸ್ಸು ಹೋಗಲು ಸಂಜೆ 4-30ರ ತನಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಅವರ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆಯಾಗುತ್ತಿದ್ದು, ಅವರ ಅನುಕೂಲಕ್ಕಾಗಿ ಮಧ್ಯಾಹ್ನ ಬಸ್ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.
ಶರಣಬಸಪ್ಪ ಹೋನಪುರ್, ಶರಣಬಸಪ್ಪ ಕುಂಬಾರ, ಮಂಜುನಾಥ ಹಲಕಟ್ಟಿ, ಮಲ್ಲಿಕಾರ್ಜುನ ಹೋಸೂರ, ಮೌನೇಶ, ಶಿವಯೋಗಿ ಬಂಕಲಗಾ, ರಾಯಪ್ಪ, ಸಿದ್ರಾಮ, ರಮೇಶ, ಕಾಶಪ್ಪ ಹೋಸೂರ, ರಾಘವೇಂದ್ರ, ರಮೇಶ, ಹಣಮಂತ, ರಾಜು ಸಾತನೂರ, ತಿಮ್ಮಯ್ಯ, ಚಂದ್ರಕಾಂತ ಅವರು ಘಟಕ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

