ಶಂಕುಸ್ಥಾಪನೆ ಹೆಸರಿನಲ್ಲಿ 'ಕೈ' ಪ್ರಣಾಳಿಕೆ ಪ್ರಚಾರ: ಬೆಳಮಗಿ
ಗುಲ್ಬರ್ಗ/ಶಹಾಬಾದ್: ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಎರಡು ದಿನಕ್ಕೊಮ್ಮೆ ಶಂಕುಸ್ಥಾಪನೆ ನಡೆಸುತ್ತ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಪ್ರಚಾರ ನಡೆಸುತ್ತಿದ್ದಾರೆಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಆರೋಪಿಸಿದ್ದಾರೆ.
ನಗರದ ಜಗದಂಬಾ ಮಂದಿರದಲ್ಲಿ ಭಾನುವಾರ ನಡೆದ ಪಕ್ಷದ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಗುಲ್ಬರ್ಗ ಗ್ರಾಮೀಣ ಮತಕ್ಷೇತ್ರದ ವಲಯ ಅಧ್ಯಕ್ಷರ ಹಾಗೂ ನಗರ ಬಿಜೆಪಿಯ ಮಾಜಿ ಅಧ್ಯಕ್ಷ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಖರ್ಗೆ ಪ್ರತಿ ಎರಡು ದಿನಕ್ಕೊಮ್ಮೆ ರೇಲ್ವೆ ಇಲಾಖೆಯ ವಿವಿಧ ಅಭಿವೃದ್ಧಿಕಾರ್ಯಗಳ ಹೆಸರಿನಲ್ಲಿ ಶಂಕುಸ್ಥಾಪನೆ ನೆರವೇರಿಸುತ್ತ ಸರ್ಕಾರದ ಕಾರ್ಯಕ್ರಮವನ್ನು ಪಕ್ಷದ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆಂದು ದೂರಿದರು.
ನಗರಸಭೆ, ಪುರಸಭೆ, ಪಂಚಾಯತಿ ಮಟ್ಟದಲ್ಲಿ ಹಾಗೂ ಪಜಾಪಪಂ ವರ್ಗಗಳ ಅಭಿವೃದ್ಧಿಗೆ ತಮ್ಮ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಯೋಜನೆಗಳನ್ನು ಕೈಬಿಟ್ಟ ಪ್ರಸಕ್ತ ರಾಜ್ಯ ಸರ್ಕಾರ ಸೇಡಿನ ಕ್ರಮ ಕೈಗೊಳ್ಳುತ್ತಿದೆ ಎಂದರು.
43 ತಾಲೂಕುಗಳ ಘೋಷಣೆಯನ್ನು ಕೈಬಿಟ್ಟಿರುವುದು ಸೇಡಿನ ರಾಜಕೀಯ ಎಂದು ಆರೋಪಿಸಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಪಕ್ಷದ ಗೆಲವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಸಿಬಿಐಯನ್ನು ರಾಜಕೀಯಕ್ಕೆ ಬಳಕೆ: ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕೂರ ಮಾತನಾಡಿ, ಹಲವು ಹಗರಣಗಳಲ್ಲಿ ಮುಳುಗಿರುವ ಕೇಂದ್ರ ಯುಪಿಎ ಸರ್ಕಾರ, ಸಿಬಿಐಯನ್ನು ತನ್ನ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಶಾಸಕ ದತ್ತಾತ್ರೇಯ ಪಾಟೀಲ್, ಜಿಲ್ಲಾ ಪ್ರ. ಕಾರ್ಯದರ್ಶಿ ಶರಣಪ್ಪ ತಳವಾರ ಮಾತನಾಡಿದರು. ನಗರ ಬಿಜೆಪಿ ಮಾಜಿ ಅಧ್ಯಕ್ಷ ಡಾ. ಅಶೋಕ ಜಿಂಗಾಡೆ ನೂತನ ಅಧ್ಯಕ್ಷ ಶಾಂತರೆಡ್ಡಿ ದಂಡಗುಲಕರ್ ಅವರಿಗೆ ಪಕ್ಷದ ಧ್ವಜ ನೀಡಿ ಅಧಿಕಾರಿ ಹಸ್ತಾಂತರಿಸಿದರು. ಶಶಿಕಲಾ ಟೆಂಗಳಿ, ಕಾರ್ಯದರ್ಶಿ ಅಶೋಕ, ಸಂಘಟನಾ ಕಾರ್ಯದರ್ಶಿ ಮುಕುಂದ ದೇಶಪಾಂಡೆ, ಚಿತ್ತಾಪುರ ಕ್ಷೇತ್ರ ಅಧ್ಯಕ್ಷ ಶಶಿಕಾಂತ ಪಾಟೀಲ್ ಬೆಳಗುಂಪಿ, ಡಾ. ಮಹೇಂದ್ರ ಕೋರಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

