'ಅಧಿಕಾರಿಗಳ ನಿರ್ಲಕ್ಷ್ಯ, ರೈತರಿಗೆ ಸಿಗದ ಪರಿಹಾರ'
ಚಿಂಚೋಳಿ: ತಾಲೂಕಿನಲ್ಲಿ ಕಳೆದ 2012-13ನೇ ಸಾಲಿನಲ್ಲಿ ಮಳೆಯ ಅಭಾವದಿಂದ ಬೆಳೆ ನಷ್ಟ ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಚಿಂಚೋಳಿ ತಾಲೂಕಿಗೆ 2.55 ಕೋಟಿ ಪರಿಹಾರ ಮಂಜೂರಿಯಾಗಿದ್ದು, ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರೈತರಿಗೆ ಸಿಗಬೇಕಾದ ಪರಿಹಾರ ನೀಡಿಲ್ಲ ಎಂದು ಜಿಪಂ ಸದಸ್ಯ ಸಂಜೀವನ್ ಯಾಕಾಪುರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ತರಾಜ್ಯ ಸರ್ಕಾರ 2012-13ನೇ ಸಾಲಿನಲ್ಲಿ ಮಳೆಯ ಅಭಾವದಿಂದ ಬೆಳೆ ನಷ್ಟ ಹೊಂದಿದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪರಿಹಾರ ವಿತರಿಸುವುದಕ್ಕಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಗುಲ್ಬರ್ಗ ಜಿಲ್ಲೆಯ 7 ತಾಲೂಕಿಗೆ 20.22 ಕೋಟಿ ಮಂಜೂರಿಗೊಳಿಸಿದೆ ಎಂದರು. ಇದರಲ್ಲಿ ಚಿಂಚೋಳಿ ತಾಲೂಕಿಗೆ ಪ್ರತ್ಯೇಕವಾಗಿ 2.55 ಕೋಟಿ ಜಿಲ್ಲಾಧಿಕಾರಿ ಮಾರ್ಚ್ 26 ರಂದು ಮಂಜೂರಿಗೊಳಿಸಿದ್ದು, ಸಂತ್ರಸ್ಥರಿಗೆ ಪರಿಹಾರವನ್ನು ಏಪ್ರಿಲ್ 10ರೊಳಗೆ ಫಲಾನುಭವಿಗಳನ್ನು ಗುರುತಿಸಿ ಹಣ ವಿತರಿಸಿ ಬಳಕೆ ಪ್ರಮಾಣ ಪತ್ರವನ್ನು ಏಪ್ರಿಲ್-15ರೊಳಗೆ ಸಲ್ಲಿಸಬೇಕೆಂದು ಸ್ಪಷ್ಟವಾಗಿ ಆದೇಶಿಸಿದ್ದರು. ಆದರೆ ಇಲ್ಲಿನ ತಹಸೀಲ್ದಾರರು ಮತ್ತು ಕೃಷಿ ಇಲಾಖೆ ಅಧಿಕಾರಿಗಳು ತಾಲೂಕಿನ ಸಣ್ಣ ಮತ್ತು ಅತಿಸಣ್ಣ ರೈತ ಫಲಾನುಭವಿಗಳನ್ನು ಗುರುತಿಸಿ ಆಯ್ಕೆ ಪಟ್ಟಿ ಮಾಡಿ ಇಲ್ಲಿನವರೆಗೆ ಪರಿಹಾರ ವಿತರಿಸಿಲ್ಲ ಎಂದು ಆರೋಪಿಸಿದ್ದಾರೆ.
ಅಧಿಕಾರ ಸ್ವೀಕಾರ
ಗುಲ್ಬರ್ಗ: ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪಮೆಂಟ್ ಲಿ. (ಕೆಆರ್ಐಡಿಎಲ್) ಗುಲ್ಬರ್ಗ-1 ಉಪವಿಭಾಗದ ಸಹಾಯಕ ನಿರ್ದೇಶಕರಾಗಿ ಬಿ.ಎಸ್. ಪಾಟೀಲ್ ಅವರು ಆ. 1ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಸಂಪರ್ಕಿಸಬೇಕಾದ ವಿಳಾಸ, ಬಿ.ಎಸ್. ಪಾಟೀಲ್, ಸಹಾಯಕ ನಿರ್ದೇಶಕರು, ಕೆಆರ್ಐಡಿಎಲ್, ಗುಲ್ಬರ್ಗ-1, ರಾಜಾಪುರ-ಕುಸನೂರ ರಸ್ತೆ, ಸರ್ಕಾರಿ ಮಹಾವಿದ್ಯಾಲಯ ಎದುರು ಗುಲ್ಬರ್ಗ 585105. ದೂ. 08472-245774.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

