ಗುಲ್ಬರ್ಗಾ

ದೋಖಾ ಜಿಪಂ ಹಂಗಾಮಿ ಅಧ್ಯಕ್ಷ

Published On :

ಕನ್ನಡಪ್ರಭ ವಾರ್ತೆ  ಯಾದಗಿರಿ  ಆ.5
ಜಿಲ್ಲಾ ಪಂಚಾಯಿತಿ ಹಂಗಾಮಿ ಅಧ್ಯಕ್ಷರಾಗಿ ಜಿಪಂ ಉಪಾಧ್ಯಕ್ಷ ಶರಣಿಕುಮಾರ ದೋಖಾ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
  ಜಿಪಂ ಅಧ್ಯಕ್ಷರಾಗಿದ್ದ ಮರೆಮ್ಮ ಶಾಣ್ಯಾನೋರ್ ಅವರ ರಾಜಿನಾಮೆಯಿಂದ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ದೋಖಾ ಅವರು, ಯಾದಗಿರಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ಆದ್ಯತೆ ನೀಡಲಾಗುವುದು ಎಂದರು.
ಅಧಿಕಾರಗಳಿಂದ ಮತ್ತೆ ಪ್ರಮಾದ: ಈಗಾಗಲೇ ಮಳೆ ಅಭಾವದಿಂದ ಕೃಷಿ ಕಾರ್ಯ ಕುಂಠಿತಗೊಂಡಿದೆ. ಆದರೆ ಕೃಷಿ ಇಲಾಖೆ ಸೇರಿದಂತೆ ಅಧಿಕಾರಿಗಳು ಸರ್ಕಾರಕ್ಕೆ ತಪ್ಪು ವರದಿ ನೀಡುತ್ತಿದ್ದಾರೆ. ಇದೇ ಕಾರಣದಿಂದ 2011ರಲ್ಲಿ ಯಾದಗಿರಿ ಬರ ಪೀಡಿತ ಪಟ್ಟಿಯಿಂದ ವಂಚಿತವಾಗಿತ್ತು. ಈಗ ಮತ್ತೆ ಅದೇ ತಪ್ಪನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ಮುಖ್ಯವಾಗಿ ಯಾದಗಿರಿ ತಾಲೂಕಿನಲ್ಲಿ ಇನ್ನೂ ಮಳೆಯಾಗಿಲ್ಲ. ಗುಬ್ಬಿ ಕುಡಿಯಲೂ ನೀರಿಲ್ಲದ ಪರಿಸ್ಥಿತಿ ಇದೆ. ಆದರೆ ಅಧಿಕಾರಿಗಳು ಯಾವ ಅಂಕಿ- ಅಂಶದ ಮೇಲೆ ಸರ್ಕಾರಕ್ಕೆ ವರದಿ ನೀಡುತ್ತಿದ್ದಾರೋ ಗೊತ್ತಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಆಗಿರುವ ತಪ್ಪನ್ನು ಸರಿಪಡಿಸಿ ಬರಪೀಡಿತ ಎಂದು ಘೋಷಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.
ಶಿಕ್ಷಕರ ಕೊರತೆ ನಿವಾರಣೆಗೆ ಯತ್ನ: ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆಯೂ ತೀವ್ರವಾಗಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಲು ಯೋಜನೆ ರೂಪಿಸಬೇಕಿದೆ. ಅಲ್ಲದೇ ಶೈಕ್ಷಣಿಕ ಕ್ಷೇತ್ರ ಸುಧಾರಣೆ ಮತ್ತು ಶಿಕ್ಷಕರ ಕೊರತೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಪ್ರಯತ್ನಿಸಲಾಗುವುದೆಂದು ಹೇಳಿದರು.
 ಜಿಪಂ ಸದಸ್ಯರಾದ ದೇವರಾಜ್ ನಾಯಕ, ಹನುಮೆಗೌಡ ಮರಕಲ್, ಜಿಪಂ ಮುಖ್ಯ ಯೋಜನಾಧಿಕಾರಿ ಬಸವರಾಜ, ಪ್ರಭಾರ ಉಪ ಕಾರ್ಯದರ್ಶಿ ಡಾ. ಮಂಜುನಾಥ, ಸತೀಶಕುಮಾರ್, ಮಹಿಪಾಲರೆಡ್ಡಿ ಹತ್ತಿಕುಣಿ, ಶಂಕ್ರಪ್ಪ, ಮಹಿಪಾಲರೆಡ್ಡಿ ದುಪ್ಪಲ್ಲಿ, ವಿಶ್ವನಾಥ ನೀಲಹಳ್ಳಿ ಇತರರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.