ಗುಲ್ಬರ್ಗಾ

15ರಂದು ರಕ್ತದಾನ ಶಿಬಿರ

Published On :

ಸುರಪುರ: ಸ್ವಾಮಿ ವಿವೇಕಾನಂದರ 150ನೇ ವರ್ಷಾಚರಣೆ ಅಂಗವಾಗಿ ತಾಲೂಕು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ರಂಗಂಪೇಟೆಯ ಓಂಕಾರ ಯೋಗ ಶಿಕ್ಷಣ ಸಮಿತಿ ಹಾಗೂ ಸುರಪುರ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಂಯುಕ್ತವಾಗಿ ಆ. 15 ರಂದು ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ.
  ಬೆ.10ಕ್ಕೆ ಯಾದಗಿರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲಿಕಾರ್ಜುನ ಮುಕ್ಕಾ ಉದ್ಘಾಟಿಸುವರು. ವೀರಶೈವ ಸಮಿತಿ ತಾಲೂಕು ಅಧ್ಯಕ್ಷ ಸುರೇಶ ಸಜ್ಜನ್ ಅಧ್ಯಕ್ಷತೆ ವಹಿಸುವರು. ತಾಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಹಾಗೂ ಏಡ್ಸ್ ನಿಯಂತ್ರಣ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಅಭಯಕುಮಾರ ಪಾಟೀಲ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಮಿತಿ ಮುಖಂಡ ಭುವನಸುಂದರ ತಿಳಿಸಿದ್ದಾರೆ.
 ರಕ್ತದಾನ ಮಾಡುವವರು ಆ.15ರೊಳಗಾಗಿ ಅಮರಪ್ಪ ಹಿರಿಯ ಆರೋಗ್ಯ ಸಹಾಯಕರು ಮೊ. 82775 08009, ಪ್ರಸ್ನಕುಮಾರ 99165 25124, ತೇಲ್ಕರ್ 99011099606, ಶಿಲ್ಪಾ ಅವಂಟಿ 8884927472, ಗೋವಿಂದರಾಜ 9741680026ಕ್ಕೆ ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.