ಕೋರಂ ಕೊರತೆ; ಸಭೆ ರದ್ದು, ಅಹವಾಲು ಸ್ವೀಕಾರ
ಗುಲ್ಬರ್ಗ: ನಗರದ ಜಿಲ್ಲಾ ಪಂಚಾಯ್ತಿ ಹಳೆ ಸಭಾಂಗಣದಲ್ಲಿ ಗುರುವಾರ ಕರೆಯಲಾಗಿದ್ದ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯಲ್ಲಿ ಮೂವರು ಸದಸ್ಯರು ಮಾತ್ರ ಪಾಲ್ಗೊಂಡಿದ್ದರಿಂದ ಕೋರಂ ಇಲ್ಲದ್ದಕ್ಕೆ ಸಭೆಯನ್ನು ರದ್ದುಗೊಳಿಸಲಾಯಿತು. ಆದರೂ ಉಪಸ್ಥಿತರಿದ್ದ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿನ ಸಮಸ್ಯೆಗಳನ್ನು ವಿವರಿಸಿದ ಡಿಡಿಪಿಐ ಜಿ. ಜಯರಾಮ, ಜಿಲ್ಲೆಯ ನಾನಾ ಕಡೆಗಳಲ್ಲಿ ಶಿಕ್ಷಕರ ಅನುಕೂಲಕ್ಕಾಗಿ ರಾಜೀವಗಾಂಧಿ ವಸತಿ ಯೋಜನೆಯಡಿಯಲ್ಲಿ ನರ್ಮಿತಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಆದರೆ, ಅಲ್ಲಿ ಸೂಕ್ತ ಸೌಕರ್ಯಗಳಿಲ್ಲದ್ದಕ್ಕೆ ಯಾರೂ ವಾಸಿಸದೇ ಅವುಗಳು ಪರದೇಶಿಯಾಗಿವೆ ಎಂದು ಹೇಳಿದರು.
ಲಕ್ಷಾಂತರ ವೆಚ್ಚದಲ್ಲಿ: ಸೇಡಂ ತಾಲೂಕಿನ ಮಳಖೇಡ, ಚಿಂಚೋಳಿಯ ಸುಲೇಪೇಟೆ, ಚಿಮ್ಮನಚೋಡ, ಜೇವರ್ಗಿಯ ಯಡ್ರಾಮಿ, ಆಂದೋಲಾ ಮತ್ತು ನೆಲೋಗಿ ಹಾಗೂ ಚಿತ್ತಾಪುರ ತಾಲೂಕಿನ ನಾಲವಾರ, ಅಲಳ್ಳಿಗಳಲ್ಲಿ ವಸತಿಗೃಹಗಳನ್ನು ಲಕ್ಷಾಂತರ ವೆಚ್ಚ ಮಾಡಿ ನಿರ್ಮಿಸಲಾಗಿದೆ. ಆದರೆ, ಇಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಆದ್ದರಿಂದ ಶಿಕ್ಷಕರೂ ಈ ವಸತಿ ನಿಲಯಕ್ಕೆ ಬರಲು ಹಿಂಜರಿಯುತ್ತಿದ್ದಾರೆ. ಕೂಡಲೇ ನೀರಿನ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದರು.
ಚಿತ್ತಾಪುರ ತಾಲೂಕಿನ ರೇವಗಿ, ಅಫಜಲ್ಪುರ ತಾಲೂಕಿನ ಬೈರಾಮಡಗಿ, ಗೊಬ್ಬೂರು, ಮದನಾ, ವಿ.ಕೆ. ಸಲಗರ, ನಿಂಬರ್ಗಾ ಮತ್ತು ಮಾದನಹಿಪ್ಪರಗಾದಲ್ಲಿ ಇದುವರೆಗೂ ಕಾಮಗಾರಿಯೇ ಪೂರ್ಣಗೊಂಡಿಲ್ಲ. ಇದರಿಂದಾಗಿ ಯಾವುದೇ ಉಪಯೋವಾಗುತ್ತಿಲ್ಲ ಎಂದು ಜಯರಾಮ ಹೇಳಿದರು.
ಅಹವಾಲು ಸ್ವೀಕರಿಸಿ ಮಾತನಾಡಿದ ಜಿಪಂ ಉಪ ಕಾರ್ಯದರ್ಶಿ ವಸಂತ ಕುಲಕರ್ಣಿ, ಈ ಬಗ್ಗೆ ಜಿಲ್ಲಾಧಿಕಾರಿಗೆ ಒಂದು ಪತ್ರ ಬರೆದು ಮಾಹಿತಿ ನೀಡುವಂತೆ ತಿಳಿಸಿದರು. ಬಳಿಕ ಜಿಪಂ ಅಧಿಕಾರಿಗಳ ಗಮನಕ್ಕೆ ತರುವಂತೆ ಹೇಳಿದರು. ಜಿಪಂ ಉಪಾಧ್ಯಕ್ಷೆ ಪಾರ್ವತಿ ಚವ್ಹಾಣ, ಜಿಪಂ ಸಿಇಒ ಪಲ್ಲವಿ ಆಕುರಾತಿ, ಮುಖ್ಯ ಯೋಜನಾಧಿಕಾರಿ ವಿರೂಪಾಕ್ಷಪ್ಪ, ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ್ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

