'ತರಬೇತಿಯಿಂದ ಸಾಕ್ಷರತೆ ಹೆಚ್ಚಳ'
ಗುಲ್ಬರ್ಗ: ಅನಕ್ಷರತೆ ಹೋಗಲಾಡಿಸಲು ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಾಪಂ ಅಧ್ಯಕ್ಷ ಚನ್ನವೀರಪ್ಪ ಸಲಗರ ಹೇಳಿದರು.
ಸಾಕ್ಷರ ಭಾರತ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಗುಲ್ಬರ್ಗ ತಾಲೂಕಿನಲ್ಲಿ 3 ದಿವಸಗಳ ಮುಖ್ಯ ತರಬೇತಿದಾರರ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಅರ್ಚನಾ ಎಸ್.ಎಂ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಾಕ್ಷರ ಭಾರತ ಕಾರ್ಯಕ್ರಮ 2011-12ನೇ ಸಾಲಿನಲ್ಲಿ ಮೊದಲನೇ ಹಂತದ ಕಾರ್ಯಕ್ರಮ ಮುಕ್ತಾಯವಾಗಿದ್ದು, ಈಗ ಜಿಲ್ಲೆಯ 7 ತಾಲೂಕುಗಳಲ್ಲಿ 2ನೇ ಹಂತದ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ತಾಲೂಕು ಮಟ್ಟದಲ್ಲಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಭೀಮಾಶಂಕರ ಮತ್ತು ಜ್ಯೋತಿ ಅವರು ತರಬೇತಿ ನೀಡಿದರು. ಉತ್ತರ ಮತ್ತು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಗವಹಿಸಿದ್ದರು.
ಡಿಆರ್ಡಿಎ ಯೋಜನಾ ನಿರ್ದೇಶಕ ಕೆಂಚಣ್ಣನವರ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಂಯೋಜಕ ಗುರುನಾಥ ರಾಥೋಡ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

