ಗುಲ್ಬರ್ಗಾ

ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಬದ್ಧ: ಪ್ರಿಯಾಂಕ್

Published On :

ಗುಲ್ಬರ್ಗ/ಶಹಾಬಾದ್: ಗ್ರಾಮಗಳ ಅಭಿವೃದ್ಧಿಗಾಗಿ ಇಲಾಖೆಗಳ ಸಭೆ ಕರೆದು ಅಧಿಕಾರಿಗಳ ಜೊತೆ ಮಾತನಾಡಿ ಸರ್ಕಾರದ ಕಾರ್ಯಕ್ರಮಗಳನ್ನು ಗ್ರಾಮಗಳಲ್ಲಿ ಅನುಷ್ಠಾನಕ್ಕೆ ಯತ್ನಿಸುವುದಾಗಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.
  ಭಂಕೂರ ಗ್ರಾಮದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಭಾರಿ ಮತ ನೀಡಿ ಗೆಲ್ಲಿಸಿದ್ದಿರಿ, ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಶಾಸಕರ ವ್ಯಾಪ್ತಿಯ ಅನುದಾನಗಳು, ಗ್ರಾಮಗಳ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಹೆಚ್ಚಿನ ಅನುದಾನ ತರುವುದಾಗಿ ಭರವಸೆ ನೀಡಿದರು.
ಚಿತ್ತಾಪುರ ಮತಕ್ಷೇತ್ರದಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಅಭಿವೃದ್ಧಿ ಕುಸಿದಿದ್ದು, ಸರ್ಕಾರಿ ಕಚೇರಿಗಳು ಲಂಚದ ಕೇಂದ್ರಗಳಾಗಿದ್ದವು. ಸಾಮಾನ್ಯ ಕೆಲಸಕ್ಕೂ ಲಂಚದ ವಾತಾವರಣವಿತ್ತು ಎಂದು ಖರ್ಗೆ ಕಿಡಿಕಾರಿದರು.
  ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಶಶಿಕಾಂತ ಪಾಟೀಲ್, ಶ್ರೀನಿವಾಸ ಸಗರ, ಮಾಪಣ್ಣ ಗಂಜಗೇರಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಜ್ಯೋತಿ ಶಿರಗುಂಡ, ಜಿಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ಪೂಜಾರಿ, ಪ್ರಕಾಶ ಜೈನ್, ಅಣೆಪ್ಪ ಸರಡಗಿ, ಅಜೀಜ್ ಸೇಠ್, ವಿರೂಪಾಕ್ಷಪ್ಪ ಗಡ್ಡದ್, ಶರಣಪ್ಪ ಧನ್ನ ಇತರರು ಇದ್ದರು. ಲಕ್ಷ್ಮೀಕಾಂತ ಕಂದಗೋಳ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.