ಸಿದ್ದರಾಮ ಹೊನಕಲ ಸಮಾಜಮುಖಿ ಬರಹಗಾರ
ಶಹಾಪುರ: ಪ್ರಥಮ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ಸಿದ್ದರಾಮ ಹೊನಕಲ ಅವರನ್ನು ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ವತಿಯಿಂದ ಸನ್ಮಾನಿಸಲಾಯಿತು.
ಪ್ರತಿಷ್ಠಾನದ ಅಧ್ಯಕ್ಷ ಮಲ್ಲಯ್ಯ ಸ್ವಾಮಿ ಮಾತನಾಡಿ, ಇಟಗಿ ಹೊನಕಲರವರು ಸಮಾಜ ಮುಖಿ ಬರಹಗಾರರಾಗಿದ್ದಾರೆ ಎಂದರು. ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನಳ್ಳಿ ಮಾತನಾಡಿ, ಸಿದ್ದರಾಮ ಹೊನಕಲ ಅವರು ವೃತ್ತಿಯಿಂದ ಜಿಲ್ಲಾ ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರವೃತ್ತಿ ಮಾತ್ರ ಸಾಹಿತ್ಯದ ಬೆಳವಣಿಗೆಯಲ್ಲಿ ಅವರು ತೊಡಗಿದ್ದಾರೆ.
ಅವರು ಬರೆದ ಪಂಚನದಿಗಳ ನಾಡಿನಲ್ಲಿ ಪ್ರವಾಸಕಥನ ಕೊಲ್ಲಾಪೂರ ವಿಶ್ವವಿದ್ಯಾಲಯದಲ್ಲಿ ಎಂ.ಎ. ವಿದ್ಯಾರ್ಥಿಗಳಿಗೆ ಪಠ್ಯಕ್ರಮವಾಗಿದೆ. ಅವರ ಪರದೆ ಸರಿಯುವ ಮುನ್ನ ಕಥೆಗೆ ಗುಲ್ಬರ್ಗ ವಿಶ್ವವಿದ್ಯಾಲಯದ ಬಿಎಸ್ಸಿ ವಿದ್ಯಾರ್ಥಿಗಳಿಗೆ ಬಯಲಾಟದ ಸುತ್ತಮುತ್ತ ಕಥೆ ಬಿಕಾಂ ವಿದ್ಯಾರ್ಥಿಗಳಿಗೆ ಪಠ್ಯಕ್ರಮವಾಗಿದೆ. ಅವರ ನೆಲೆದ ಮರೆಯ ನಿಧಾನ ಕೃತಿಗೆ ಗುಲ್ಬರ್ಗ ವಿವಿ ಚಿನ್ನದ ಪದಕ ನೀಡಿದೆ. ಸಾಹಿತ್ಯ ಲೋಕಕ್ಕೆ 20ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ನೀಡಿರುವ ಹೊನಕಲರು ಬಿಸಿಲು ನಾಡಿನ ಭರವಸೆಯ ಬರಹಗಾರರು ಕೂಡ ಹೌದು ಎಂದು ಅಂಗಡಿ ಅಭಿಪ್ರಾಯಪಟ್ಟರು. ನಯನ ಕೆ.ಜೆ. ನಾಗರತ್ನ ಓಲೇಕಾರ, ಭೀಮರಾಯ ರಸ್ತಾಪೂರ, ಸಿದ್ದಯ್ಯ ಹಿರೇಮಠ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

