ಕಬ್ಬಿಣದ ರಾಡ್ ಬಡಿದು ವ್ಯಕ್ತಿ ಸಾವು
ಗುಲ್ಬರ್ಗ: ಕಬ್ಬಿಣದ ರಾಡ್ ಬಡಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕಿಣ್ಣಿ ಸೇತುವೆ ಮೇಲೆ ನಡೆದಿದೆ. ಛತ್ತಿಸಗಡದಿಂದ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ ಮತ್ತು ಗುಲ್ಬರ್ಗದಿಂದ ಮದುವೆ ಸಮಾರಂಭ ಮುಗಿಸಿಕೊಂಡು ಹುಮನಾಬಾದಿಗೆ ತೆರಳುತ್ತಿದ್ದ ಟವೇರಾ ಜೀಪ್ ಸ್ಪರ್ಶಿಸಿ ಟವೇರಾದಲ್ಲಿದ್ದ ವ್ಯಕ್ತಿಯೊಬ್ಬನಿಗೆ ಕಬ್ಬಿಣದ ರಾಡು ಬಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ. ಮೃತನನ್ನು ಹುಮನಾಬಾದಿನ ಎಂ.ಎಂ. ಖಾಲಿಕ್ (40) ಎಂದು ಗುರುತಿಸಲಾಗಿದೆ. ಕಬ್ಬಿಣ ತುಂಬಿದ ಲಾರಿ ಸೇತುವೆ ಮೇಲೆಯೇ ಪಲ್ಟಿಯಾಗಿ ಬಿದ್ದಿದ್ದರಿಂದ ಇಡೀ ರಾತ್ರಿ ಸಂಚಾರಕ್ಕೆ ವ್ಯತ್ಯಯವುಂಟಾಗಿತ್ತು. ಇದೀಗ ಸಂಚಾರ ಸುಗಮವಾಗಿದೆ. ಗ್ರಾಮೀಣ ಪಿಎಸ್ಐ ಕೆ.ಎಂ. ಸತೀಶ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
'ಬಸವ ತತ್ವದ ಅರಿವು ಮೂಡಲಿ'
ಗುಲ್ಬರ್ಗ: ಪ್ರತಿಯೊಬ್ಬರ ಮನೆಯಲ್ಲಿಯೂ ಬಸವ ತತ್ವದ ಅರಿವು ಮೂಡಲಿ, ಯುವ ಪೀಳಿಗೆಗೆ ಬಸವ ತತ್ವದ ಸಂದೇಶಗಳನ್ನು ಮುಟ್ಟಿಸುವಂತಾಗಬೇಕೆಂದು ಬಸವ ಸಮಿತಿಯ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ಅಭಿಪ್ರಾಯಪಟ್ಟರು. ನಗರದ ಕಾಂಗ್ರೆಸ್ ಮುಖಂಡ ಅಂಬಾರಾಯ ಅಷ್ಠಗಿ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ಮನೆಯಲ್ಲಿ ಅರಿವಿನ ಮನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿನಾಥ ಸೊಂತ, ಸುಭಾಷ ಬಿರಾದಾರ ಕಮಲಪುರ್, ಗುಲ್ಬರ್ಗ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಸೋಮಶೇಖರ ಗೋನಾಯಕ, ಜಗನ್ನಾಥ ಗೋಧಿ, ಶಾರದಾ ಜತ್ತಿ ಸೇರಿದಂತೆ ನೂರಾರು ಬಸವ ಅನುಯಾಯಿಗಳು ಭಾಗವಹಿಸಿದ್ದರು. ವಿ.ಜಿ. ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಡಾ. ನಾಗೇಂದ್ರ ಮಸೂತಿ ಉಪನ್ಯಾಸ ನೀಡಿದರು. ಕಾಂಗ್ರೆಸ್ ಮುಖಂಡ ಅಂಬಾರಾಯ ಅಷ್ಠಗಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಗುಂಡೇರಾವ ಹಾಗರಗಿ ಅಧ್ಯಕ್ಷತೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

