ಆರ್ಟಿಐ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಗುಲ್ಬರ್ಗ ಆ.12
ಮಾಹಿತಿ ಹಕ್ಕು ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ಮುಖಂಡರು ಸೋಮವಾರ ನಗರದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ರಾಜಕೀಯ ಪಕ್ಷಗಳು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ತರುವಂತೆ ಒತ್ತಾಯಿಸಿ ಮತ್ತು ರಾಜಕೀಯ ಪಕ್ಷಗಳು ಇದರ ವ್ಯಾಪ್ತಿಯಿಂದ ಹೊರಗುಳಿಯಲು ಸಂಸತ್ತಿನಲ್ಲಿ ತಿದ್ದುಪಡಿ ಮಸೂದೆ ಮಂಡಿಸುತ್ತಿರುವುದಕ್ಕೆ ವಿರೋಧಿಸಿದರು.
ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದು ಏಳು ವರ್ಷ ಕಳೆದಿವೆ. ಆದರೂ ಇನ್ನೂ ಕಾಯ್ದೆ ಸಂಪೂರ್ಣವಾಗಿ ಅನುಷ್ಠಾನ ಆಗದಿರುವುದು ತುಂಬಾ ಕಳಕಳಿಯ ವಿಚಾರ. ಕಾಯ್ದೆಯ ಉದ್ದೇಶ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿದ್ದು, ನಾವು ಕಟ್ಟುವ ತೆರಿಗೆ ಹಣ ದುರ್ಬಳಕೆ ಆಗದಂತೆ ನೋಡಿಕೊಳ್ಳುವುದು ಏಕೈಕ ಬ್ರಹ್ಮಾಸ್ತ್ರವೇ ಮಾಹಿತಿ ಹಕ್ಕು ಕಾಯ್ದೆ. ಈ ಕಾಯ್ದೆ ಜಾರಿಗೆ ಬಂದಾಗಿನಿಂದ ದೇಶಾದ್ಯಂತ ಹಲವಾರು ಹಗರಣಗಳು ಹೊರಬಂದಿವೆ ಮತ್ತು ಕೋಟ್ಯಾಂತರ ರು. ವ್ಯರ್ಥವಾಗುತ್ತಿರುವುದನ್ನು ನಿಲ್ಲಿಸಲು ಸಾಧ್ಯವಾಗಿದೆ. ಅಲ್ಲದೇ ಭ್ರಷ್ಟ ಅಧಿಕಾರಿಗಳು, ರಾಜಕಾರಣಿಗಳು ಈ ಕಾಯ್ದೆಯಿಂದ ಜೈಲು ಸೇರಿದ್ದಾರೆ ಎಂದು ತಿಳಿಸಿದರು.
ರಾಜಕೀಯ ಪಕ್ಷಗಳು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಯಿಂದ ಹೊರಗುಳಿಯಲು ಸಂಸತ್ತಿನಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ರಾಜಕೀಯ ಪಕ್ಷಗಳು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಯಿಂದ ಹೊರಗುಳಿಸುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದರು.
ಸಿದ್ರಾಮಯ್ಯ ಎಸ್. ಹಿರೇಮಠ, ಸಂಗಮನಾಥ ಹಿರೇಗೌಡ, ವಿಜಯಕುಮಾರ ಚಿಮಕೋಡ, ರಘೋತ್ತಮ ಸರಾಫ, ಕಲ್ಯಾಣರಾವ ಪಾಟೀಲ್ ಸೇರಿದಂತೆ ಹಲವಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

