ಗುಲ್ಬರ್ಗಾ

ನೀರು ಸರಬರಾಜು ಪರಿಶೀಲನೆಗೆ ತಂಡ ರಚನೆ

Published On :

ಕನ್ನಡಪ್ರಭ ವಾರ್ತೆ ಗುಲ್ಬರ್ಗ ಆ.12
ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ನೀರು ಸರಬರಾಜು ಯೋಜನೆ ಕಾಮಗಾರಿ ಪರಿಶೀಲನೆಗೆ, ಕುಡಿವ ನೀರು ಸರಬರಾಜು ಯೋಜನೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಗುಲ್ಬರ್ಗ ಜಿಪಂನ ಡಿ.ಆರ್.ಡಿ.ಎ. ಯೋಜನಾ ನಿರ್ದೇಶಕ ಎಸ್.ಎಂ. ಕೆಂಚಣ್ಣನವರ್ ಅಧ್ಯಕ್ಷತೆಯಲ್ಲಿ ನೀರು ಸರಬರಾಜು ಯೋಜನೆ ಪರಿಶೀಲನಾ ತಂಡ ರಚಿಸಲಾಗಿದೆ ಎಂದು ಜಿಪಂ ಸಿಇಒ ಅಧಿಕಾರಿ ಪಲ್ಲವಿ ಆಕುರಾತಿ ತಿಳಿಸಿದ್ದಾರೆ.
ಈ ತಂಡದಲ್ಲಿ ವಿಶ್ವಬ್ಯಾಂಕ್ ಯೋಜನೆಯ ಜಿಲ್ಲಾ ನೆರವು ಘಟಕದ ಸಹಾಯಕ ನಿರ್ದೇಶಕ ರಾಜಶೇಖರ ಪಾಟೀಲ್ ಹಾಗೂ ಜೇವರ್ಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲಾ ನರಸಿಂಹರೆಡ್ಡಿ ಸದಸ್ಯರಾಗಿದ್ದು, ಈ ಎಲ್ಲ ಅಧಿಕಾರಿಗಳು ಒಗ್ಗೂಡಿ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಕುಡಿವ ನೀರಿನ ಕಾಮಗಾರಿಗೆ ಕುಡಿವ ನೀರಿನ ಸಂಬಂಧಿತ ಎಲ್ಲ ದಾಖಲೆಗಳನ್ನು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗ ಜೇವರ್ಗಿ ಇವರಿಂದ ಪಡೆದು ಕಾಮಗಾರಿ ಗುಣಮಟ್ಟ ವಿಳಂಬವಾಗಿರುವ ಬಗ್ಗೆ ಅನುಷ್ಠಾನದ ಮೊತ್ತ, ಕಾಮಗಾರಿಯ ಉದ್ದೇಶ ಬಗ್ಗೆ ನಿಖರ ಮಾಹಿತಿಯನ್ನು ಸಂಗ್ರಹಿಸುವಂತೆ ಆದೇಶಿಸಿದ್ದಾರೆ.
ಈ ಕಾಮಗಾರಿ ಕೈಗೊಳ್ಳಲು ಶಾಸಕರ ನಿಧಿಯಿಂದ 10 ಲಕ್ಷ ಬಿಡುಗಡೆ ಮಾಡಲಾಗಿತ್ತು. ಆದರೆ ಈವರೆಗೆ ನೀರು ಸರಬರಾಜು ಮಾಡಿರುವುದಿಲ್ಲ. ಅನುದಾನವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು 2013ರ ಜೂನ್ 17 ರಂದು ಜರುಗಿದ ಕೆಡಿಪಿ ಸಭೆಯಲ್ಲಿ ಚರ್ಚೆಯಾಗಿತ್ತು. ಈ ಹಿನ್ನೆಲೆಯಲ್ಲಿ ಈ ಕಾಮಗಾರಿಯನ್ನು ಪರಿಶೀಲಿಸಲು ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.