ಗುಲ್ಬರ್ಗಾ

ಮಡಿವಾಳ ಮಾಚಿದೇವರು ನಿಷ್ಠುರವಾದಿ: ಸಚಿವ

Published On :

ಸೇಡಂ: ಅನುಭವ ಮಂಟಪದ ಶರಣರಲ್ಲಿ ಮಡಿವಾಳ ಮಾಚಿದೇವರು ಪ್ರಾಮಾಣಿಕ ಹಾಗೂ ನಿಷ್ಠುರ ವ್ಯಕ್ತಿತ್ವ ಉಳ್ಳವರಾಗಿದ್ದರು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ಇಲ್ಲಿನ ರಿಂಗ್ ರಸ್ತೆಯ ಮಡಿಕಟ್ಟೆಯಲ್ಲಿ ಮಡಿವಾಳ ಮಾಚಿದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿನ ಹುಳುಕನ್ನು ಎತ್ತಿಹಿಡಿದು ಹೇಳುವ ವ್ಯಕ್ತಿತ್ವ 12ನೇ ಶತಮಾನದ ಅನುಭವ ಮಂಟಪದ ಶರಣರಲ್ಲಿ ಅಂಬಿಗರ ಚೌಡಯ್ಯ ಹಾಗೂ ಮಡಿವಾಳ ಮಾಚಿದೇವರು ಹೊಂದಿದ್ದರು ಎಂದರು.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎನ್. ಶಂಕ್ರಪ್ಪ ಮಾತನಾಡಿ, ಸರ್ವರ ಹಿತಕ್ಕಾಗಿ ಇಂದು ಮಡಿವಾಳ ಸಮಾಜ ಬದುಕುತ್ತಿದೆ. ಇದನ್ನರಿತು ಮಡಿವಾಳ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಒತ್ತಾಯಿಸಿದರು.
ಚಿತ್ತಾಪುರ ಕಂಬಳೇಶ್ವರ ಮಠದ ಸೋಮಶೇಖರ ಶ್ರೀ, ಸೇಡಂ ಹಾಲಪ್ಪಯ್ಯ ಮಠದ ಪಂಚಾಕ್ಷರಿ ಶ್ರೀ, ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಶ್ರೀ, ಗುಲ್ಬರ್ಗ ದೇವರ ಗುರುಪೀಠ ಚಿಗರಳ್ಳಿಯ ಸಿದ್ಧಬಸವ ಕಬೀರ್ ಶ್ರೀ, ಯೋಗಿನಿ ಪ್ರಭುಶ್ರೀ ತಾಯಿ, ಗುಲ್ಬರ್ಗ ಜ್ಞಾನಗಂಗಾ ವಿಶ್ವವಿದ್ಯಾಲಯದ ಕುಲಸಚಿವ ದಯಾನಂದ, ಜಿಪಂ ಅಧ್ಯಕ್ಷ ಶರಣಪ್ಪ ಪಾಟೀಲ್ ತೇಲ್ಕೂರ್, ಹಿರಿಯ ಸ್ವತಂತ್ರ ಹೋರಾಟಗಾರ ವಿದ್ಯಾಧರ ಗುರೂಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ್, ಮುಖಂಡ ಸುದರ್ಶನರೆಡ್ಡಿ ಪಾಟೀಲ್, ವಿಶ್ವನಾಥ ಪಾಟೀಲ್ ಬೊಮ್ನಳ್ಳಿ, ಬಸವರಾಜ ಸಾಹು, ರವಿಕುಮಾರ ಸಾಹು ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಮುಂಚೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಡಿವಾಳ ಮಾಚಿದೇವರ ಮೆರವಣಿಗೆ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.