ಗುಲ್ಬರ್ಗಾ

ಬಂಡವಾಳಶಾಹಿಗಳ ಹಿಡಿತದಲ್ಲಿ ಕಾಂಗ್ರೆಸ್- ಬಿಜೆಪಿ: ಆರೋಪ

Published On :

ಗುಲ್ಬರ್ಗ/ಶಹಾಬಾದ್, ಆ.13
ಕೋಮುವಾದವನ್ನು ಪೋಷಿಸುವಲ್ಲಿ ಮತ್ತು ಜನ ಸಾಮಾನ್ಯರ ಐಕ್ಯತೆಯನ್ನು ಮುರಿಯುವಲ್ಲಿ ಒಂದೇ ಮುಖದ ಎರಡು ನಾಣ್ಯಗಳಂತಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಈ ದೇಶದ ಬಂಡವಾಳಶಾಹಿಗಳ ಹಿಡಿತದಲ್ಲಿವೆ ಎಂದು ಎಸ್‌ಯುಸಿಐ-ಸಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ವಿ. ದಿವಾಕರ್ ಆರೋಪಿದರು.
ವಾಡಿ ಪಟ್ಟಣದ ನ್ಯಾಷನಲ್ ಐಟಿಐ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್‌ಯುಸಿಐ ಕಮ್ಯೂನಿಸ್ಟ್ ಪಕ್ಷದ ಸಂಸ್ಥಾಪಕ ಕಾಮ್ರೇಡ್ ಶಿವದಾಸ ಘೋಷ ಅವರ 37ನೇ ಸ್ಮಾರಕ ಸಭೆ ಉದ್ಘಾಟಿಸಿ ಮಾತನಾಡಿದರು.
ಬೆಲೆ ಏರಿಕೆ, ನಿರುದ್ಯೋಗ: ರಾಜಕೀಯ ಪಕ್ಷಗಳು ಇಂದು ಜನ ಸೇವೆ ಹೆಸರಿನಲ್ಲಿ ಟಾಟಾ, ಬಿರ್ಲಾ, ಅಂಬಾನಿಯಂಥಹ ಶ್ರೀಮಂತರ ಪಾದ ಸೇವೆಯೇ ತಮ್ಮ ಪರಮ ಗುರಿಯನ್ನಾಗಿಸಿಕೊಂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಯಾವುದೇ ಪಕ್ಷ ಅಧಿಕಾರಕ್ಕೆ ಬಂದರು ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಬಗೆಹರಿಸಲಾಗುತ್ತಿಲ್ಲ ಎಂದರು.
ಸಿಗದ ಪರಿಹಾರ: ಇಂದು ಖಾಸಗೀಕರಣದಿಂದ ಆರೋಗ್ಯ, ಶಿಕ್ಷಣ ಕ್ಷೇತ್ರಗಳು ಉದ್ದಿಮೆಗಳಾಗುತ್ತಿವೆ. ಕಳೆದ 65 ವರ್ಷಗಳಿಂದ ಚುನಾವಣೆಗಳು ನಡೆಯುತ್ತಿವೆ. ಆದರೆ, ಜನರ ದಾರಿದ್ರ್ಯ, ಬಡತನಗಳಿಗೆ ಪರಿಹಾರ ಸಿಕ್ಕಿಲ್ಲ.
 ಇದಕ್ಕೆ ಆಡಳಿತ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಕಾರಣವೆಂದು ಹರಿಹಾಯ್ದರು.
ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಸಭೆಯಲ್ಲಿ ಪಾಲ್ಗೊಂಡಿದ್ದರು. ಗುಂಡಣ್ಣ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.