ಗುಲ್ಬರ್ಗಾ

ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಅಗತ್ಯ

Published On :

ಚಿತ್ತಾಪುರ: ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಶಿಕ್ಷಣದಲ್ಲಿ ಪ್ರತಿಭಾವಂತರಾದ ವಿದ್ಯಾರ್ಥಿಗಳಿಗೆ ಶಿಕ್ಷಕರು ಹಾಗೂ ಪಾಲಕರು ಪ್ರೋತ್ಸಾಹ ನೀಡಬೇಕೆಂದು ಸರ್ಕಾರಿ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪಂಡಿತ ಬಿ.ಕೆ. ಹೇಳಿದರು.
ಪಟ್ಟಣಛದ ಅಂಬಿಕಾ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡ ಉತ್ತಮ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣಕ್ಕೆ ಮಹಾತ್ಮ ಜ್ಯೋತಿಭಾ ಫೂಲೇ ಅವರು ಮಹಿಳೆಯರ ಶಿಕ್ಷಣಕ್ಕಾಗಿ ಮೊಟ್ಟ ಮೊದಲು ಶಿಕ್ಷಣ ಸಂಸ್ಥೆ ಆರಂಭಿಸಿದರು.
ಫೂಲೇ ಅವರ ಪತ್ನಿ ಸಾವಿತ್ರಿಬಾಯಿ ಉತ್ತಮ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಆದರ್ಶ ಶಿಕ್ಷಕಿಯಾಗಿ ಹೊರಹೊಮ್ಮಿದ್ದರು. ಫೂಲೇ ಅವರ ತತ್ವಗಳು ಜೀವನದಲ್ಲಿ ಆಳವಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು.
ಕೋರಿ ಸಿದ್ಧೇಶ್ವರ ಕಾಲೇಜಿನ ಉಪನ್ಯಾಸಕ ನರಸಪ್ಪ ಜಿನಕಟ್ಟಿ, ಭೀಮಾಶಂಕರ ಮಾತನಾಡಿದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಸಂಗೀತಾ ನಾಗಣ್ಣ ಅವರಿಗೆ ಸಂಸ್ಥೆಯ ಸದಸ್ಯ ಮಹೇಶ ಮೈತ್ರೆ ಸನ್ಮಾನಿಸಿ ಚೆಕ್ ವಿತರಿಸಿದರು. ಉಪನ್ಯಾಸಕರಾದ ಭವಾನಿ ಕುಲಕರ್ಣಿ, ಮಮತಾ ರಾಜಾಪುರ, ಭರತೇಶ್ವರಿ, ಆಶಾರಾಣಿ ಇದ್ದರು.
ಪ್ರಾಚಾರ್ಯ ಶ್ರೀನಿವಾಸ ಕಾಂಬಳೆ ಅಧ್ಯಕ್ಷತೆ ವಹಿಸಿದ್ದರು. ಶೃತಿ ಮಲ್ಕಣ್ಣ ಪ್ರಾರ್ಥನೆ ಹಾಡಿದರು. ಭಾರತಿ ಸ್ವಾಗತಿಸಿದರು. ಯಲ್ಲಾಲಿಂಗ ಪೂಜಾರಿ ನಿರೂಪಿಸಿದರು. ಚಂದ್ರಿಕಾ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.