ದೇಶದ ಅಭಿವೃದ್ಧಿಗೆ ಕೈಜೋಡಿಸಿ: ಶಾಸಕ
ಕ.ಪ್ರ.ವಾರ್ತೆ, ಸುರಪುರ, ಆ. 15
ಸ್ವಾತಂತ್ರ್ಯ ಸಿಕ್ಕು 67 ವರ್ಷವಾದ್ರೂ ಅಂದುಕೊಂಡಂತೆ ಪ್ರಗತಿ ಸಾಧಿಸಿಲ್ಲ. ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದ್ದೇವೆ. ಬರುವ ದಿನಗಳಲ್ಲಿ ದೇಶವನ್ನು ಅಭಿವೃದ್ದಿಪಥದತ್ತ ಕೊಂಡೊಯ್ಯಲು ಎಲ್ಲರೂ ಕೈಜೋಡಿಸಬೇಕೆಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಇಲ್ಲಿಯ ಪ್ರಭು ಕಾಲೇಜು ಆವರಣದಲ್ಲಿ ಗುರುವಾರ ತಾಲೂಕು ಆಡಳಿತ ಏರ್ಪಡಿಸಿದ್ದ 67ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿ, ದೇಶವನ್ನು ಕಾಡುತ್ತಿರುವ ಭಯೋತ್ಪಾದನೆ ಮಟ್ಟಹಾಕಲು ಪ್ರತಿಯೊಬ್ಬ ಯುವಕರು ಸಂಕಲ್ಪ ಮಾಡಬೇಕು. ದೇಶ ರಕ್ಷಣೆಯಲ್ಲಿ ಯವಕರ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ದೇಶ ಪ್ರೇಮದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಕೆಲಸ ಮಾಡಿ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ಮಾಡಬೇಕು ಎಂದರು.
ಪ್ರಾಮಾಣಿಕವಾಗಿ ಪ್ರಯತ್ನಿಸಿ: ಬಡವರಿಗಾಗಿ ಅನ್ನಭಾಗ್ಯ, ಕ್ಷೀರಭಾಗ್ಯ, ಸಮವಸ್ತ್ರ, ಬಿಸಿಯೂಟ, ಉಚಿತ ಪಠ್ಯಪುಸ್ತಕ, ಅಪೌಷ್ಟಿಕತೆ ನಿವಾರಿಸಲು ಉಚಿತ ಮಾತ್ರೆ ವಿತರಣೆ ಸೇರಿದಂತೆ ನಮ್ಮ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಇವುಗಳ ಸಮರ್ಪಕ ಅನುಷ್ಠಾನಕ್ಕೆ ತಾಲೂಕು ಅನುಷ್ಠಾನಾಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಹದಗೆಟ್ಟು ಹೋಗಿರುವ ಪಟ್ಟಣ ಹಾಗೂ ಗ್ರಾಮೀಣ ರಸ್ತೆಗಳ ಸುಧಾರಣೆಗೆ ಮೊದಲ ಆದ್ಯತೆ ನೀಡಬೇಕು. ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ ಮಾದರಿ ತಾಲೂಕನ್ನಾಗಿ ಮಾಡಲು ಅಧಿಕಾರಿಗಳು ಸಹಕರಿಸಬೇಕು ಎಂದರು.
ರಾಷ್ಟ್ರದ ಅಭಿವೃದ್ಧಿಗೆ ಪಣ ತೊಡೋಣ: ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಮೊಹ್ಮದ್ ಗೌಸುದ್ದೀನ್ ಮಾತನಾಡಿ, ದೇಶವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಎದೆಗಾರಿಕೆ ಯುವಕರು ಬೆಳಸಿಕೊಳ್ಳಬೇಕು. ಪ್ರತಿಯೊಬ್ಬ ನಾಗರಿಕರನ್ನು ಸಮಾನತೆಯಿಂದ ಕಾಣುವ ಜಾತ್ಯತೀತ ಮನೋಭಾವ ಬೆಳಸಿಕೊಳ್ಳಬೇಕು. ಅಂದಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ನಾವು ನೀವು ಸಾಗಿ ದೇಶವನ್ನು ಅಭಿವೃದ್ಧಿ ರಾಷ್ಟ್ರವನ್ನಾಗಿ ಮಾಡೋಣ ಎಂದು ಕರೆ ನೀಡಿದರು. ಪಿಐ ರಾಜಕುಮಾರ ವಾಜಂತ್ರಿ, ಜಿಪಂ ಎಇಇ ಬಸಯ್ಯ ಹಿರೇಮಠ, ಲೋಕೋಪಯೋಗಿ ಇಲಾಖೆಯ ಎಇಇ ಪ್ರಹ್ಲಾದ್ ಜೋಷಿ, ಪುರಸಭೆ ಮುಖ್ಯಾಧಿಕಾರಿ ಶಿವುಕುಮಾರ ಸ್ವಾಮಿ ಹಿರೇಮಠ, ಎಪಿಎಂಸಿ ಅಧ್ಯಕ್ಷ ಬಸಣ್ಣ ಬಂಗಿ, ಮುಖಂಡರಾದ ವಿಠ್ಠಲ ಯಾದವ್, ರಾಜಶೇಖರಗೌಡ ಪಾಟೀಲ, ಶಿವಣ್ಣ ಮಂಗಿಹಾಳ, ಸೂಲಪ್ಪ ಕಮತಗಿ, ಸುರೇಶ ತಂಬಾಕಿ, ಅಬ್ದುಲ್ ಗಫಾರ್ ನಗನೂರಿ, ವೆಂಕಟೇಶ ಹೊಸ್ಮನಿ, ತಿಪ್ಪರಾಜಗೌಡ, ಮನೋಹರ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

