ಗುಲ್ಬರ್ಗಾ

ನಾಳೆ ರಾಜ್ಯ ಮಟ್ಟದ ಸಂಸ್ಕೃತಿ ಪ್ರತಿಭೋತ್ಸವ

Published On :

ಗುಲ್ಬರ್ಗ: ಡಾ. ಬಾಬು ಜಗಜೀವನರಾಮ್ ಸ್ಮಾರಕ ಶಿಕ್ಷಣ ಸಂಸ್ಥೆಯ ಸಂವಿಧಾನದ ಶಿಲ್ಪಿ ಸಂಗೀತ ವಿದ್ಯಾಲಯವು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆ.18ರಂದು ನಗರದ ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಸಂಸ್ಕೃತಿ ಪ್ರತಿಭೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಶರಣಪ್ಪ ತೋರಣಕರ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 32 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಜತೆಗೆ ಸಂಸ್ಥೆಯ ದಶಮಾನೋತ್ಸವ ಸಂಭ್ರಮ ಆಚರಣೆ ಮಾಡಲಾಗುವುದು ಎಂದರು.
ಭರತನಾಟ್ಯ, ಜನಪದ ಗಾಯನ, ಹಲಗೆ ವಾದನ, ಪುರವಂತಿಗೆ, ಡೊಳ್ಳು ಕುಣಿತ, ಗೀಗೀ ಪದ, ಡೊಳ್ಳಿನ ಪದ, ಮುಖವಾಡ, ರಂಗಗೀತೆಗಳು ಮುಂತಾದ ಸಂಸ್ಕೃತಿಕ ಪ್ರತಿಭೋತ್ಸವ ನಡೆಯಲಿವೆ ಎಂದರು.
ಅಂದು ಬೆಳಗ್ಗೆ 10.30 ಗಂಟೆಗೆ ನಡೆಯುವ ಸಮಾರಂಭವನ್ನು ಗುಲ್ಬರ್ಗ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ವಿಧಾನ ಪರಿಷತ್ ಸದಸ್ಯ ಕೆ.ಬಿ. ಶಾಣಪ್ಪ ಆಗಮಿಸಲಿದ್ದಾರೆ ಎಂದರು.
ಗುಲ್ಬರ್ಗ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾಶಿನಾಥ ತಳಕೇರಿ, ಚಲನಚಿತ್ರ ನಿರ್ದೇಶಕ ಬಿ.ಎ. ಪುರುಷೋತ್ತಮ, ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಎಂ.ಎಸ್. ಪಾಸೋಡಿ, ಗುಲ್ಬರ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೊಟ್ರಪ್ಪ, ಗುಲ್ಬರ್ಗ ಸಂಗೀತ, ನೃತ್ಯ, ನಾಟಕ ಅಧೀಕ್ಷಕ ಬಿ.ಎನ್. ಭಜಂತ್ರಿ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.
ಜನಪದ ಅಕಾಡೆಮಿ ಮಾಜಿ ಅಧ್ಯಕ್ಷ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಬಾನಂದೂರು ಕೆಂಪಯ್ಯ ಅಧ್ಯಕ್ಷತೆ ವಹಿಸುವರು. ಗುಲ್ಬರ್ಗದ ಸುಲಫಲ ಮಠದ ಡಾ. ಮಹಾಂತ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಅಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಚಲನಚಿತ್ರ ನಿರ್ಮಾಪಕ ರವಿಚಂದ್ರ, ದೇವರಾಜ, ವೆಂಕಟೇಶ ಹಾಸನ, ಮೋಹನ್ ರಾಜ ಮೈತ್ರಿ, ಕೋಡಿಹಳ್ಳಿ ರಾಮಣ್ಣ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಮಾನೇಶ ಬಿಲ್ಲಾವ ಅಧ್ಯಕ್ಷತೆ ವಹಿಸುವರು. ಪ್ರಶಸ್ತಿ ವಿಜೇತರಿಗೆ ಕಲಾ ಕುಸುಮ ಪ್ರಶಸ್ತಿ ಪತ್ರ ಪ್ರದಾನ ನಡೆಯುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಶ್ವನಾಥ ತೋಟನಳ್ಳಿ, ಪ್ರಮೋದ ಪುರಾಣಿಕ, ವಿ.ಸಿ. ನಿರಡಗಿ, ಮಾನೇಶ ಬಿಲ್ಲಾವ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.