ವರಮಹಾಲಕ್ಷ್ಮಿ ಪೂಜೆ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ
ಯಾದಗಿರಿ: ಶ್ರಾವಣ ಮಾಸದ ನಿಮಿತ್ತ ಶುಕ್ರವಾರ ನಗರದ ರಾಘವೇಂದ್ರ ಪರಿಮಳ ಮಂಟಪದಲ್ಲಿ ವರಮಹಾಲಕ್ಷ್ಮೀ ಪೂಜೆಯ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ಜರುಗಿತು.
ನೂರಾರು ವಿಪ್ರ ಮಹಿಳೆಯರು ಸಮಾರಂಭದಲ್ಲಿ ಭಾಗವಹಿಸಿ ಲಕ್ಷ್ಮೀ ಪ್ರತಿಮೆಗೆ ಕುಂಕಮಾರ್ಚನೆ ಮಾಡಿದರು. ಪಂ. ನರಸಿಂಹಾಚಾರ್ಯ ನೇತೃತ್ವದಲ್ಲಿ ಈ ಸಮಾರಂಭ ನಡೆರಲಾಯಿತು.
ಇದಕ್ಕೂ ಮುನ್ನ ಹರಿಕಥಾಮೃತ ಸಾರ ಮತ್ತು ಪ್ರವಚನಗಳು ಜರುಗಿದವು. ಆಚಾರ್ಯರು ವರಮಹಾಲಕ್ಷ್ಮೀ ವ್ರತಾಚರಣೆಯ ಕುರಿತು ವಿಶೇಷ ಉಪನ್ಯಾಸ ನೀಡಿ, ಪ್ರತಿಯೊಂದು ಹಬ್ಬಗಳ ಹಿಂದೆ ಒಂದು ವಿಶಿಷ್ಟತೆ ಇದೆ. ಅವುಗಳ ಬಗ್ಗೆ ಅರ್ಥ ಮಾಡಿಕೊಂಡು ಅಚರಿಸಿದರೆ, ಅವುಗಳು ಫಲದಾಯಕವಾಗುತ್ತವೆ ಎಂದು ನುಡಿದರು.
ಅಧುನಿಕತೆಯಲ್ಲಿ ನಾವು ನಮ್ಮ ಸಂಪ್ರದಾಯಗಳನ್ನು ಮರೆಯುತ್ತಿದ್ದೇವೆ. ಇದು ಮುಂದುವರಿದಲ್ಲಿ ಭವಿಷ್ಯದಲ್ಲಿ ನಮ್ಮ ಪೀಳಿಗೆಗೆ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳು ಇಲ್ಲದಂತಾಗುತ್ತದೆ. ಅದಕ್ಕಾಗಿ ಕೆಲ ಕಾಲವಾದರೂ ಅಧುನಿಕತೆಯ ವಾಸ್ತವದಿಂದ ಹೊರಬಂದು ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದರ ಜತೆಗೆ ಸಮಾಜ ಸಂಘಟನೆಗೊಳ್ಳುತ್ತದೆ ಎಂದು ಹೇಳಿದರು. ಸಮಾರಂಭದಲ್ಲಿ ನಗರದ ಭಜನಾ ಮಂಡಳಿಯ ಸದಸ್ಯರು ಮತ್ತು ಮಹಿಳೆಯರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

