ಗುಲ್ಬರ್ಗಾ

ಮಳೆ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

Published On :

ಕೆಂಭಾವಿ: ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇಲ್ಲಿಯ ಬಲಭೀಮೇಶ್ವರ ದೇವಸ್ಥಾನಕ್ಕೆ ನೀರು ನುಗ್ಗಿದ್ದು, ತಗ್ಗು ಪ್ರದೇಶದ ಬಡಾವಣೆಗಳ ಅನೇಕ ಮನೆಗಳಿಗೂ ನೀರು ನುಗ್ಗಿದೆ. ರಸ್ತೆಗಳು ಜಲಾವೃತಗೊಂಡಿವೆ.
ಮುಂಗಾರು ಆರಂಭವಾಗಿ ಎರಡೂವರೆ ತಿಂಗಳಾದರೂ ಸಮರ್ಪಕವಾಗಿ ಮಳೆಯಾಗದ್ದರಿಂದ ಕುಡಿವ ನೀರಿಗೂ ಬರ ಎದುರಾಗಿತ್ತು. ಆದರೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಪಟ್ಟಣದಲ್ಲಿ ತಂಪೆರಗಿದ್ದು ರೈತರ ಮೊಗದಲ್ಲಿ ಸಂತಸದ ಛಾಯೆ ಎದ್ದು ಕಾಣುತ್ತಿದೆ. ಮಳೆ ನಿರೀಕ್ಷೆಯಲ್ಲಿದ್ದ ರೈತಾಪಿ ವರ್ಗಕ್ಕೆ ವಾಯುಭಾರ ಕುಸಿತದ ಪರಿಣಾಮ ಸುರಿಯುತ್ತಿರುವ ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಆದರೆ ಪಟ್ಟಣದ ಹಲವು ಬಡಾವಣೆಗಳು ಮಾತ್ರ ಕೆಸರು ಗದ್ದೆಯಾಗಿದ್ದು, ಇದರಿಂದ ಜನತೆಗೆ ತೀವ್ರ ತೊಂದರೆಯಾಗಿದೆ.
ತೊಂದರೆ: ಪಟ್ಟಣದ ಬಜಾರ ಮುಖ್ಯ ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು ಇದರಿಂದ ವ್ಯಾಪಾರಿಗಳಿಗೆ ಅನಾನುಕೂಲವಾಗಿ ವ್ಯಾಪಾರಕ್ಕೆ ತೊಂದರೆಯಾಗಿದೆ ಎಂದು ತೋಟಪ್ಪ ಅರಕೇರಿ ಹೇಳುತ್ತಾರೆ. ಅಲ್ಲದೆ ಹಳೆ ಬಸ್ ನಿಲ್ದಾಣ ಪ್ರದೇಶ ಸಂಪೂರ್ಣ ಕೆಸರುಗದ್ದೆಯಾಗಿದ್ದು, ದೂರದ ಊರಿನಿಂದ ಬರುವ ಅನೇಕ ಪ್ರಯಾಣಿಕರಿಗೆ ತೊಂದರೆಯಾಗಿದೆ. ರಸ್ತೆ ದಾಟಬೇಕಾದರೆ ಜೀವ ಕೈಯ್ಯಲ್ಲಿ ಹಿಡಿದು ರಸ್ತೆ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ತೀವ್ರ ಸಮಸ್ಯೆ ಉಂಟಾಗಿದೆ.
ಈಗ ಶ್ರಾವಣ ಮಾಸವಿದ್ದ ಕಾರಣ ಇದೇ ರಸ್ತೆಯ ಮೇಲೆ ಬರುವ ಪಟ್ಟಣದ ಅರಾಧ್ಯ ದೈವ ಬಲಭೀಮೇಶ್ವರ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ಇದರಿಂದ ಶ್ರಾವಣ ವ್ರತಾಚರಣೆಯಲ್ಲಿ ತೊಡಗಿದ್ದ ಸುಮಾರು 80 ಜನ ಭಕ್ತರಿಗೆ ತೊಂದರೆಯಾಗಿದೆ. ದೇವಸ್ಥಾನಕ್ಕೆ ನುಗ್ಗಿದ ನೀರನ್ನು ಭಕ್ತರು ಭಾನುವಾರ ಹೊರಹಾಕಿದ್ದಾರೆ. ಭಾನುವಾರವೂ ಮಳೆ ಬೀಳುತ್ತಿದೆ.
ಜಿಲ್ಲಾದ್ಯಂತ ಮಳೆ: ಜಿಲ್ಲೆಯ ಯಾದಗಿರಿ, ಶಹಾಪುರ ಹಾಗೂ ಸುರಪುರ ಭಾಗದಲ್ಲೂ ಭಾನುವಾರ ಮಳೆಯಾಗಿದೆ. ಕಳೆದ ಒಂದು ವಾರದಿಂದ ಜಿಲ್ಲಾದ್ಯಂತ ಮಳೆಯಾಗುತ್ತಿದ್ದು, ಇನ್ನೂ ಮಳೆ ಬರುವ ವಾತಾವರಣವಿದೆ. ಆಗಾಗ ಜಿಟಿಜಿಟಿ ಮಳೆ ಬರುತ್ತಿದ್ದು, ಒಂದು ವಾರದಿಂದ ಮಳೆ ಹಾಗೂ ಮೋಡದ ವಾತಾವರಣ ಮುಂದುವರಿದಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.