ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ, ಹಾರಾಡದ ರಾಷ್ಟ್ರಧ್ವಜ
ಹುಣಸಗಿ: ರಾಜ್ಯದಾಧ್ಯಂತ ಎಲ್ಲಾ ಪಂಚಾಯಿತಿಗಳಲ್ಲಿ ದಿನನಿತ್ಯ ಕಡ್ಡಾಯವಾಗಿ ಧ್ವಜಾರೋಹಣ ಮಾಡಬೇಕೆಂದು ಆದೇಶ ಹೊರಡಿಸಿ ಇನ್ನೂ ಮೂರು ದಿನಗಳಾಗಿಲ್ಲ. 3 ದಿನಗಳಲ್ಲಿಯೇ ಆದೇಶ ಉಲ್ಲಂಘನೆಯಾದ ಘಟನೆ ಹೆಬ್ಬಾಳ (ಬಿ) ಗ್ರಾಪಂನಲ್ಲಿ ನಡೆದಿದೆ.
ಆ.16ರಿಂದ ಪ್ರತಿ ದಿನ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕಾರ್ಯಾಲಯಗಳಲ್ಲಿ ಕಡ್ಡಾಯವಾಗಿ ರಾಷ್ಟ್ರ ಧ್ವಜಾರೋಹಣ ಮಾಡಬೇಕೆಂದು ಆದೇಶ ಹೊರಡಿಸಲಾಗಿತ್ತು. ಆದರೆ ಈ ಹೆಬ್ಬಾಳ(ಬಿ) ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಧ್ವಜಾರೋಹಣ ಮಾಡದೇ ಇರುವ ಘಟನೆ ಕಂಡು ಬಂತು. ಈ ಕುರಿತು ಸ್ಥಳಕ್ಕೆ ತೆರಳಿ ವಿಚಾರಿಸಿದಾಗಿ ಹೆಬ್ಬಾಳ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಕಚೇರಿಗೆ ಬಂದಿಲ್ಲ. ಇನ್ನು ಕಾರ್ಯದರ್ಶಿಯವರಿಗೆ ವರ್ಗಾವಣೆಯಾಗಿದೆ ಎಂಬ ಮಾತುಗಳು ಕೇಳಿ ಬಂದವು. ಸರ್ಕಾರದ ಆದೇಶಕ್ಕೂ ಬೆಲೆ ಕೊಡದೇ ಅಧಿಕಾರಿಗಳು ಅಗೌರವ ತೋರಿಸಿರುವುದು ನಿಜಕ್ಕೂ ಖಂಡನೀಯ ಎಂದು ಗ್ರಾಮದ ಮುಖಂಡರೊಬ್ಬರು ಖಾರವಾಗಿ ನುಡಿದರು. ಅಲ್ಲದೇ ಈ ಗ್ರಾಪಂ ಇರುವುದು ಹುಣಸಗಿ ಸುರಪುರ ಮುಖ್ಯ ರಸ್ತೆಗೆ ಹೊಂದಿಕೊಂಡಿರುವುದರಿಂದ ಧ್ವಜ ಇಲ್ಲದ ಸ್ಥಂಬ ಎಲ್ಲರ ಲಕ್ಷ್ಯ ತನ್ನಡೆಗೆ ಸೆಳೆಯುವಂತೆ ಮಾಡಿತ್ತು. ಆದೇಶ ಹೊರಡಿಸಿದ ಒಂದೆರಡು ದಿನದಲ್ಲಿಯೇ ಈ ಅಚಾತುರ್ಯ ಘಟನೆ ನಡೆದಿದೆ. ಯಾವುದೇ ಕಾರಣಕ್ಕೂ ಅಧಿಕಾರಿಗಳು ಇಂತಹ ಘಟನೆಗಳ ಬಗ್ಗೆ ನಿರ್ಲಕ್ಷ್ಯ ತೋರದೇ ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟು, ಮನಸೋ ಇಚ್ಚೆಯಿಂದ ವರ್ತಿಸುವ ಅಧಿಕಾರಿಗಳ ಮೇಲೆ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎನ್ನುವುದನ್ನು ಕಾದುನೋಡಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

