'ವಚನ ಚಿಂತನೆಯಿಂದ ಅರಾಜಕತೆ ನಿವಾರಣೆ'
ಕ.ಪ್ರ.ವಾರ್ತ್ಣೆ ಚಿತ್ತಾಪುರ ಆ.20
ಇಂದಿನ ಸಮಾಜದಲ್ಲಿರುವ ಅರಾಜಕತೆ ನಿವಾರಿಸಲು ಶರಣ ವಚನಗಳು ಚಿಂತನೆ ಮಾಡುವುದು ಅಗತ್ಯ ಎಂದು ಗುಲ್ಬರ್ದ ಪಿಡಿಎ ಎಂಜನಿಯರ್ ಕಾಲೇಜಿನ ಉಪನ್ಯಾಸಕ ಸಂಜಯ ಮಾಕಲ್ ಹೇಳಿದರು.
ತಾಲೂಕಿನ ಹೆಬ್ಬಾಳದಲ್ಲಿ ಅಣಿವೀರಭದ್ರೇಶ್ವರ ದೇವಸ್ಥಾನ ಹಾಗೂ ರಾವೂರ ಬಾಳಿ ವಿವಿಧೋದ್ಧೇಶ ಸೇವಾ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡ ಶರಣರ ವಚನಗಳ ಚಿಂತನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಅರಾಜಕತೆ ತಾಂಡವಾಡುತ್ತಿದೆ. ಇವುಗಳನ್ನು ನಿಯಂತ್ರಿಸಲು ಹಿಂದಿನ ಕಾಲದಲ್ಲಿ ಶರಣರು ವಚನಗಳು ಬರೆದು ಸಮಾಜ ಬದಲಾವಣೆಗೆ ಶ್ರಮಿಸಿದ್ದಾರೆ. ಅದೇ ವಚನಗಳು ಪ್ರತಿಯೊಬ್ಬರು ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಯಂತ್ರಣ ಸಾಧ್ಯ ಎಂದು ಅಭಿಪ್ರಾಯಪಟ್ಟರು. ದೇವಸ್ಥಾನ ಸಮಿತಿ ಅಧ್ಯಕ್ಷ ರಾಜೇಂದ್ರ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮದ ಮುಖಂಡ ಬಸವರಾಜ ಶಿವಗೋಳ, ತಾಪಂ ಸದಸ್ಯ ಮಲ್ಲಿಕಾರ್ಜುನ ಶಿವಗೋಳ, ವಿಶ್ವಜ್ಯೋತಿ ಪ್ರತಿಷ್ಟಾನ ಅಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ, ಅಣಿವೀರಪ್ಪ ನಾಗೂರೆ ಉಪಸ್ಥಿತರಿದ್ದರು. ರಾಜಶೇಖರ ಯಾಳಗಿ ಪ್ರಾರ್ಥನೆ ಗೀತೆ ಹಾಡಿದರು. ಸಿದ್ದಲಿಂಗ ಬಾಳಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

