'ವಿದ್ಯಾರ್ಥಿಗಳು ಕೃಷಿ ಕ್ಷೇತ್ರಕ್ಕೆ ಸಮಯ ಮೀಸಲಿಡಬೇಕು'
ಕ.ಪ್ರ.ವಾರ್ತೆ, ಯಾದಗಿರಿ, ಆ.20
ಕೃಷಿ ಕ್ಷೇತ್ರದಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಬರುವ ದಿನಗಳಲ್ಲಿ ಅಧಿಕಾರಿಗಳಾಗಿ ತಮ್ಮ ಸಮಯವನ್ನು ರೈತರ ಸೇವೆಗಾಗಿ ಮೀಸಲಿಟ್ಟು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು ಪತ್ರಕರ್ತ ಮಲ್ಲಿಕಾರ್ಜುನರೆಡ್ಡಿ ಹತ್ತಿಕುಣಿ ಕರೆ ನೀಡಿದರು.
ಮಂಗಳವಾರ ಹತ್ತಿಕುಣಿ ಗ್ರಾಮದ ರೈತ ಸಂಪರ್ಕ ಕೇಂದ್ರ ಆವರಣದಲ್ಲಿ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಹಮ್ಮಿಕೊಂಡಿದ್ದ ಕೃಷಿ ಕಾರ್ಯಾನುಭವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿಗಳು ಮೂರು ತಿಂಗಳ ಕಾಲ ಕಾರ್ಯಾನುಭವ ಯೋಜನೆಯಡಿ ಗ್ರಾಮದಲ್ಲಿ ನೆಲೆಸಿ ಈ ಭಾಗದ ರೈತರ ಹಲವಾರು ಸಮಸ್ಯೆಗಳಿಗೆ ಪರಿಹಾರ ಸೂಚಿಸಿ ಕೃಷಿಯಲ್ಲಿ ಸಾವಯುವ ಕೃಷಿ ಪದ್ಧತಿ ಬಳಕೆ ಕುರಿತು ಪರಿಣಾಮಕಾರಿಯಾಗಿ ತಿಳಿವಳಿಕೆ ಮೂಡಿಸಿರುವುದು ಬರುವ ದಿನಗಳಲ್ಲಿ ರೈತರಿಗೆ ಹೆಚ್ಚಿನ ಅನುಕೂಲತೆಯಾಗುತ್ತದೆ ಎಂದು ಹೇಳಿದರು.
ಕೃಷಿ ವಿದ್ಯಾರ್ಥಿಗಳಾದ ಗಿರೀಶ್ ಹಾಗೂ ಕಾಸಯ್ಯ ಹಿರೇಮಠ ಮಾತನಾಡಿ, ಕಳೆದ 3 ತಿಂಗಳ ಅವಧಿಯಲ್ಲಿ ಗ್ರಾಮದ ರೈತರು ಹಾಗೂ ಅಧಿಕಾರಿಗಳ ವರ್ಗ ನಮಗೆ ಉತ್ತಮ ಸಹಕಾರ ನೀಡಿದ್ದಾರೆ. ಇಲ್ಲಿನ ಅನುಭವಗಳು ನಮಗೆ ಮುಂದೆ ಸಹಕಾರಿಯಾಗಲಿದೆ. ರೈತರಿಗೆ ಆಧುನಿಕ ಕೃಷಿ, ನೈಸರ್ಗಿಕ ಕೃಷಿ, ಬೀಜೋಪಚಾರ ಹಾಗೂ ಕೀಟಗಳ ನಿರ್ವಹಣೆ ಕುರಿತು ಅಗತ್ಯ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು.
ಕೃಷಿ ಅಧಿಕಾರಿ ವಿಶ್ವನಾಥ ಮಾತನಾಡಿ, ವಿದ್ಯಾರ್ಥಿಗಳು ಉತ್ಸಾಹದಿಂದ ಕೆಲಸ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ರೈತರು ಅದರ ಲಾಭ ಪಡೆದು ಆರ್ಥಿಕವಾಗಿ ಬದಲಾವಣೆಯಾಗಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀಕಾಂತ ತಮ್ಮಣೋರ್ ವಹಿಸಿದ್ದರು.ಅಧಿಕಾರಿ ಮಲ್ಲಿನಾಥ ಪಟ್ಟೆದಾರ, ಸಿದ್ದಣಗೌಡ ರಾಂಪೂರಳ್ಳಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

