ಗುಲ್ಬರ್ಗಾ

ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ಕ.ಪ್ರ.ವಾರ್ತೆ ಟಿ ಯಾದಗಿರಿ ಟಿ ಆ.20
ತಾಲೂಕಿನ ಬಾಚವಾಳ, ಹತ್ತಿಕುಣಿ, ಭೀಮನಳ್ಳಿ ಗ್ರಾಮ ಹಾಗೂ ಸುತ್ತಮುತ್ತಲಿನಿಂದ ದಿನಾಲೂ ಯಾದಗಿರಿಗೆ ಆಗಮಿಸುವ ಕಾಲೇಜು ವಿದ್ಯಾರ್ಥಿಗಳಿಗಾಗಿ ಬೆಳಗ್ಗೆ ವಿಶೇಷ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಮಂಗಳವಾರ ಗ್ರಾಮದ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಎಲ್ಲಾ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ದಿನಾಲೂ ಹತ್ತಿಕುಣಿ, ಯಡ್ಡಳ್ಳಿ, ಬಾಚವಾರ, ಹೊರುಂಚಾ ಹಾಗೂ ಬಂದಳ್ಳಿ ಗ್ರಾಮದಿಂದ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಜಿಲ್ಲಾ ಕೇಂದ್ರ ಯಾದಗಿರಿಗೆ ಆಗಮಿಸುತ್ತಾರೆ. ಆದರೆ, ಬೆಳಗ್ಗೆ ಸೂಕ್ತ ಬಸ್ ಸೌಕರ್ಯವಿಲ್ಲದೆ ಸರಿಯಾದ ಸಮಯಕ್ಕೆ ಕಾಲೇಜಿಗೆ ಬರಲು ಸಾಧ್ಯವಾಗುತ್ತಿಲ್ಲ. ಸಮಸ್ಯೆ ಕುರಿತು ಈಶಾನ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಅನೇಕ ಬಾರಿ ಲಿಖಿತ ಮನವಿ ನೀಡಿದರೂ ಕ್ರಮ ಕೈಗೊಂಡಿಲ್ಲ. ಜು.27ರಂದು ಯಡ್ಡಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಆಗ ಸೂಕ್ತ ಬಸ್ ಸೌಲಭ್ಯ ಕಲ್ಪಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಇದುವರೆಗೆ ಬಸ್ ಸೌಲಭ್ಯ ಕಲ್ಪಿಸಿಲ್ಲ ಎಂದು ಆರೋಪಿಸಿದರು.
ಸೇಡಂನಿಂದ ಹೊರಡುವ ಬಸ್ಗೆ ನೂರಾರು ವಿದ್ಯಾರ್ಥಿಗಳು ಯಾದಗಿರಿಗೆ ಬರಬೇಕಾಗಿದೆ. ಟಾಪ್ ಮೇಲೆ ಕುಳಿತು ಅಪಾಯಕರ ರೀತಿಯಲ್ಲಿ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಏನಾದರೂ ಅನಾಹುತ ಸಂಭವಿಸಿದರೆ ಯಾರು ಜವಾಬ್ದಾರಿ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಈ ಬಸ್ ತಪ್ಪಿದರೆ ಮತ್ತೆ ಶಾಲಾ ಕಾಲೇಜಿಗೆ ಬರಲು ಬಸ್ ವ್ಯವಸ್ಥೆಯಿಲ್ಲ. ರಿಯಾಯತಿ ಪಾಸ್ ಇದ್ದರೂ ಹಣ ಕೊಟ್ಟು ಬರುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಬಸ್ ನಿಲ್ದಾಣಕ್ಕೆ ಆಗಮಿಸುವ ಮತ್ತು ಹೊರಹೋಗುವ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಸಾರಿಗೆ ಸಂಚಾರ ಅರ್ಧ ಗಂಟೆಗಳ ಕಾಲ ಕೂಡ ಸ್ಥಗಿತಗೊಂಡಿತ್ತು.
ನಂತರ ವಿಷಯ ತಿಳಿದು ಆಗಮಿಸಿದ ಸಾರಿಗೆ ಸಂಸ್ಥೆ ಅಧಿಕಾರಿಗಳು ವಿದ್ಯಾರ್ಥಿಗಳ ಮನವಿಯನ್ನು ಆಲಿಸಿದರು. ಶೀಘ್ರದಲ್ಲಿ ಬೆಳಗ್ಗೆ ಬಸ್ ಸೌಕರ್ಯ ಒದಗಿಸಲಾಗುವು ಎಂದು ಬರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ವಾಪಸ್ ಪಡೆದರು.
ಸಾಬಣ್ಣ, ರಾಜಕುಮಾರ, ಅನ್ವರಪಾಷಾ, ಮಲ್ಲಿಕಾರ್ಜುನ, ತಿಮ್ಮಾರೆಡ್ಡಿ, ಹನುಮಂತ, ಬಸವರಾಜ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.